ಗುರುವಾರ , ಡಿಸೆಂಬರ್ 3, 2020
23 °C

ಎಫ್‌ಪಿಐ: ₹ 17,749 ಕೋಟಿ ಹೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಅಕ್ಟೋಬರ್‌ 1ರಿಂದ 23ರವರೆಗಿನ ಅವಧಿಯಲ್ಲಿ ದೇಶದ ಬಂಡವಾಳ ಮಾರುಕಟ್ಟೆಯಲ್ಲಿ ₹ 17,749 ಕೋಟಿ ಹೂಡಿಕೆ ಮಾಡಿದ್ದಾರೆ.

ಕಂಪನಿಗಳ ತ್ರೈಮಾಸಿಕದ ಫಲಿತಾಂಶವು ನಿರೀಕ್ಷೆಗಿಂತಲೂ ಉತ್ತಮವಾಗಿರುವುದು ಹಾಗೂ ಆರ್ಥಿಕ ಚಟುವಟಿಕೆಗಳು ಚೇತರಿಕೆ ಕಂಡುಕೊಳ್ಳುತ್ತಿರುವುದರಿಂದ ಈ ಪ್ರಮಾಣದ ಹೂಡಿಕೆಯಾಗುತ್ತಿದೆ ಎಂದು ತಜ್ಞರು ಅಭಿಪ್ರಾಯಪ‍ಟ್ಟಿದ್ದಾರೆ.

ಹೂಡಿಕೆದಾರರು ₹ 15,642 ಕೋಟಿ ಮೌಲ್ಯದ ಷೇರುಗಳನ್ನು ಹಾಗೂ ₹ 2,107 ಕೋಟಿ ಮೌಲ್ಯದ ಸಾಲಪತ್ರಗಳನ್ನು ಖರೀದಿಸಿದ್ದಾರೆ. ಸೆಪ್ಟೆಂಬರ್‌ನಲ್ಲಿ ₹ 3,419 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದರು.

‘ಬ್ರೆಜಿಲ್‌, ದಕ್ಷಿಣ ಆಫ್ರಿಕಾ, ತೈವಾನ್‌ ಮತ್ತು ಥಾಯ್ಲೆಂಡ್‌ನಂತಹ ಪ್ರವರ್ಧಮಾನಕ್ಕೆ ಬರುತ್ತಿರುವ ದೇಶಗಳಲ್ಲಿ ಎಫ್‌ಪಿಐ ಹೊರಹರಿವು ಕಂಡುಬರುತ್ತಿರುವ ಸಂದರ್ಭದಲ್ಲಿ ಭಾರತದ ಮಾರುಕಟ್ಟೆಯಲ್ಲಿ ಬಂಡವಾಳ ಹೂಡಿಕೆಯಾಗುತ್ತಿದೆ. ಭಾರತದ ಮಾರುಕಟ್ಟೆಯು ದೀರ್ಘಾವಧಿಯಲ್ಲಿ ಉತ್ತಮ ಏರಿಕೆ ದಾಖಲಿಸಲಿದೆ ಎನ್ನುವುದನ್ನು ಹೂಡಿಕೆದಾರರು ಗ್ರಹಿಸಿದ್ದಾರೆ’ ಎಂದು ಗ್ರೋವ್‌ ಸಂಸ್ಥೆಯ ಸಿಒಒ ಹರ್ಷ್‌ ಜೈನ್‌ ತಿಳಿಸಿದ್ದಾರೆ.

‘ಜಾಗತಿಕವಾಗಿ ಕೇಂದ್ರೀಯ ಬ್ಯಾಂಕ್‌ಗಳು ಬಡ್ಡಿದರ ತಗ್ಗಿಸುವಲ್ಲಿ ಹೊಂದಾಣಿಕೆಯ ನೀತಿ ಅನುಸರಿಸುತ್ತಿವೆ. ಇದರಿಂದಾಗಿ ವಿದೇಶಿ ಬಂಡವಾಳ ಹೂಡಿಕೆದಾರರು ಭಾರತವನ್ನೂ ಒಳಗೊಂಡು ಪ್ರವರ್ಧಮಾನಕ್ಕೆ ಬರುತ್ತಿರುವ ಮಾರುಕಟ್ಟೆಗಳಲ್ಲಿ ಹೂಡಿಕೆ ಮಾಡುತ್ತಿದ್ದಾರೆ’ ಎಂದು ಮಾರ್ನಿಂಗ್‌ಸ್ಟಾರ್‌ ಇಂಡಿಯಾದ ಸಹಾಯಕ ನಿರ್ದೇಶಕ ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.