ಶನಿವಾರ, ನವೆಂಬರ್ 28, 2020
24 °C

ಎಫ್‌ಪಿಐ: ₹ 22,033 ಕೋಟಿ ಹೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಅಕ್ಟೋಬರ್‌ನಲ್ಲಿ ಭಾರತದ ಮಾರುಕಟ್ಟೆಯಲ್ಲಿ ₹ 22,033 ಕೋಟಿ ಹೂಡಿಕೆ ಮಾಡಿದ್ದಾರೆ.

ಹೂಡಿಕೆದಾರರು ಅಕ್ಟೋಬರ್‌ 1ರಿಂದ 30ರವರೆಗಿನ ಅವಧಿಯಲ್ಲಿ ₹ 19,541 ಕೋಟಿ ಮೌಲ್ಯದ ಷೇರುಗಳನ್ನು ಹಾಗೂ ₹ 2,492 ಕೊಟಿ ಮೌಲ್ಯದ ಸಾಲಪತ್ರಗಳನ್ನು ಖರೀದಿಸಿದ್ದಾರೆ.

ಆರ್ಥಿಕ ಚಟುವಟಿಕೆಗಳ ಚೇತರಿಕೆ ಹಾಗೂ ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಕಂಪನಿಗಳ ಹಣಕಾಸು ಸಾಧನೆ ಉತ್ತಮವಾಗಿರುವುದರಿಂದ ಈ ಪ್ರಮಾಣದ ಬಂಡವಾಳ ಒಳಹರಿವು ಆಗಿದೆ ಎಂದು ತಜ್ಞರು ಹೇಳಿದ್ದಾರೆ. ಸೆಪ್ಟೆಂಬರ್‌ನಲ್ಲಿ ಹೂಡಿಕೆದಾರರು ₹ 3,419 ಕೋಟಿಯನ್ನು ಹಿಂದಕ್ಕೆ ಪಡೆದಿದ್ದರು.

ಜಾಗತಿಕ ಮಾರುಕಟ್ಟೆಯಲ್ಲಿ ಲಭ್ಯವಿರುವ ಹೆಚ್ಚುವರಿ ನಗದು ಭಾರತದ ಷೇರುಪೇಟೆಗಳಲ್ಲಿ ಹೂಡಿಕೆಯಾಗುತ್ತಿದೆ ಎಂದು ಮಾರ್ನಿಂಗ್‌ಸ್ಟಾರ್‌ ಇಂಡಿಯಾದ ಸಹಾಯಕ ನಿರ್ದೇಶಕ ಹಿಮಾಂಶು ಶ್ರೀವಾಸ್ತವ ಹೇಳಿದ್ದಾರೆ.

ಭಾರತ ಮತ್ತು ಚೀನಾ ನಡುವಣ ಬಿಕ್ಕಟ್ಟಿನ ಕಾರಣದಿಂದಾಗಿ ವಿದೇಶಿ ಹೂಡಿಕೆದಾರರು ಭಾರತದ ಹಣಕಾಸು ಮಾರುಕಟ್ಟೆಯಲ್ಲಿ ಬಂಡವಾಳ ತೊಡಗಿಸುವುದರಿಂದ ಹಿಂದೆ ಸರಿಯುವ ಸಾಧ್ಯತೆಯೂ ಇದೆ ಎಂದೂ ಅವರು ತಿಳಿಸಿದ್ದಾರೆ.

ಕೋವಿಡ್‌–19 ಪ್ರಕರಣಗಳ ಸಂಖ್ಯೆ ತುಸು ಇಳಿಮುಖವಾಗಿರುವುದು ಹಾಗೂ ಲಸಿಕೆ ಲಭ್ಯವಾಗುವ ಆಶಾಭಾವನೆ ಹೆಚ್ಚಿರುವುದರಿಂದಾಗಿ ಭಾರತವು ಇನ್ನೂ ಹೆಚ್ಚಿನ ಹೂಡಿಕೆಯನ್ನು ಆಕರ್ಷಿಸುವ ಸಾಧ್ಯತೆ ಇದೆ ಎಂದು ಗ್ರೋವ್ ಸಂಸ್ಥೆಯ ಸಹ ಸ್ಥಾಪಕ ಹರ್ಷ್‌ ಜೈನ್‌ ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.