ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಪಿಐ ಹೊರಹರಿವು ಹೆಚ್ಚಳ

Last Updated 8 ಮಾರ್ಚ್ 2020, 19:45 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19 ವೈರಸ್‌ ಭಾರತದ ಬಂಡವಾಳ ಮಾರುಕಟ್ಟೆಯ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತಿದೆ. ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಮಾರಾಟಕ್ಕೆ ಹೆಚ್ಚಿನ ಗಮನ ನೀಡುತ್ತಿದ್ದಾರೆ.

ಮಾರ್ಚ್‌ 2 ರಿಂದ 6ರವರೆಗಿನ ವಹಿವಾಟಿನಲ್ಲಿ ಭಾರತದ ಬಂಡವಾಳ ಮಾರುಕಟ್ಟೆಯಿಂದ ₹ 13,157 ಕೋಟಿ ಹಿಂದಕ್ಕೆ ಪಡೆದಿದ್ದಾರೆ.

ಹೂಡಿಕೆದಾರರು ₹ 8,997 ಕೋಟಿ ಮೌಲ್ಯದ ಷೇರುಗಳನ್ನು ಹಾಗೂ ₹ 4,159 ಕೋಟಿ ಮೌಲ್ಯದ ಸಾಲಪತ್ರಗಳನ್ನು ಮಾರಾಟ ಮಾಡಿದ್ದಾರೆ.

2019ರ ಸೆಪ್ಟೆಂಬರ್‌ನಿಂದ ಫೆಬ್ರುವರಿವರೆಗೆ ಸತತವಾಗಿ ಹೂಡಿಕೆ ಮಾಡಿದ್ದರು.

‘ಜಾಗತಿಕ ಮಾರುಕಟ್ಟೆಯ ಮೇಲೆ ಕೋವಿಡ್‌ ಪರಿಣಾಮ ತೀವ್ರಗೊಳ್ಳುತ್ತಿದೆ. ಇದು ಭಾರತದ ಮಾರುಕಟ್ಟೆಯ ಮೇಲೂ ಪ್ರತಿಫಲಿಸುತ್ತಿದೆ. ಇದು ಈಗಾಗಲೇ ಮಂದಗತಿಯಲ್ಲಿ ಇರುವ ಆರ್ಥಿಕತೆಯನ್ನು ಇನ್ನಷ್ಟು ಕುಗ್ಗಿಸುವ ಆತಂಕವನ್ನು ಮೂಡಿಸಿದೆ’ ಎಂದು ಗ್ರೋವ್‌ ಕಂಪನಿಯ ಸಹ ಸ್ಥಾಪಕ ಹರ್ಷ್‌ ಜೈನ್‌ ಹೇಳಿದ್ದಾರೆ.

‘ಆರ್ಥಿಕತೆ ಬೆಳವಣಿಗೆ ಮಂದಗತಿಯಲ್ಲಿ ಇರಲಿದೆ ಎನ್ನುವ ಮುನ್ಸೂಚನೆ ಅಮೆರಿಕಕ್ಕೆ ದೊರೆತಿದೆ. ಹೀಗಾಗಿಯೇ ಅಲ್ಲಿನ ಕೇಂದ್ರೀಯ ಬ್ಯಾಂಕ್‌ ಫೆಡರಲ್‌ ರಿಸರ್ವ್‌ ತುರ್ತಾಗಿ ಶೇ 0.50ರಷ್ಟು ಬಡ್ಡಿದರ ಕಡಿತ ಮಾಡಿದೆ. ಪಾಶ್ಚಾತ್ಯ ದೇಶಗಳಲ್ಲಿ ಕೋವಿಡ್‌ ಬೀರಲಿರುವ ಪರಿಣಾಮವನ್ನು ಆಧರಿಸಿ ಭಾರತದಲ್ಲಿ ಎಫ್‌ಪಿಐ ಹೂಡಿಕೆ ನಿರ್ಧಾರವಾಗಲಿದೆ’ ಎಂದು ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT