ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಪಿಐ: ಮೂರು ತಿಂಗಳ ಬಳಿಕ ಬಂಡವಾಳ ಹೊರಹರಿವು

Last Updated 4 ಅಕ್ಟೋಬರ್ 2020, 14:36 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಮೂರು ತಿಂಗಳ ಬಳಿಕ ಸೆಪ್ಟೆಂಬರ್‌ನಲ್ಲಿ ದೇಶದ ಮಾರುಕಟ್ಟೆಯಲ್ಲಿ ಮಾರಾಟಕ್ಕೆ ಗಮನ ನೀಡಿದ್ದಾರೆ.

ಅವರು ಸೆಪ್ಟೆಂಬರ್‌ನಲ್ಲಿ ಷೇರುಪೇಟೆಯಿಂದ ₹ 7,783 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದು, ಸಾಲಪತ್ರ ಮಾರುಕಟ್ಟೆಯಲ್ಲಿ ₹ 4,364 ಕೋಟಿ ಹೂಡಿಕೆ ಮಾಡಿದ್ದಾರೆ. ಹೀಗಾಗಿ ಸೆಪ್ಟೆಂಬರ್‌ನಲ್ಲಿಒಟ್ಟಾರೆ ₹ 3,419 ಕೋಟಿ ಬಂಡವಾಳ ಹಿಂದಕ್ಕೆ ಪಡೆದಂತಾಗಿದೆ.

ಜೂನ್‌ನಲ್ಲಿ ₹ 24,053 ಕೋಟಿ, ಜುಲೈನಲ್ಲಿ ₹ 3,301 ಕೋಟಿ ಹಾಗೂ ಆಗಸ್ಟ್‌ನಲ್ಲಿ ₹ 46,532 ಕೋಟಿ ಹೂಡಿಕೆ ಮಾಡಿದ್ದರು.

ಕೋವಿಡ್–19‌ ಪ್ರಕರಣಗಳು ಹೆಚ್ಚಾಗುತ್ತಿರುವುದು ಹಾಗೂ ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ಕಾರಣದಿಂದಾಗಿ ಷೇರುಪೇಟೆಯಲ್ಲಿ ಅನಿಶ್ಚಿತ ಸ್ಥಿತಿ ನಿರ್ಮಾಣವಾಗಿರುವುದೇ ಸೆಪ್ಟೆಂಬರ್‌ನಲ್ಲಿ ಬಂಡವಾಳ ಹೊರಹರಿವಿಗೆ ಕಾರಣ ಎಂದು ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT