ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಆಗಸ್ಟ್ 1ರಿಂದ 9ರ ವರೆಗೆ ದೇಶೀಯ ಷೇರು ಮಾರುಕಟ್ಟೆಯಿಂದ ₹13,431 ಕೋಟಿ ಬಂಡವಾಳವನ್ನು ಹಿಂಪಡೆದಿದ್ದಾರೆ.
‘ಬ್ಯಾಂಕ್ ಆಫ್ ಜಪಾನ್ ಬಡ್ಡಿದರ ಏರಿಕೆ ಮಾಡಿರುವುದರಿಂದ ಯೆನ್ ಕರೆನ್ಸಿ ಮೌಲ್ಯದಲ್ಲಿ ಹೆಚ್ಚಳವಾಗಿದೆ. ಅಮೆರಿಕದಲ್ಲಿ ಆರ್ಥಿಕ ಹಿಂಜರಿತದ ಭೀತಿ ಸೃಷ್ಟಿಯಾಗಿದೆ. ಇದರಿಂದ ದೇಶೀಯ ಮಾರುಕಟ್ಟೆಯಲ್ಲಿ ಬಂಡವಾಳದ ಹೊರಹರಿವು ಹೆಚ್ಚಿದೆ’ ಎಂದು ಜಿಯೋಜಿತ್ ಫೈನಾನ್ಶಿಯಲ್ ಸರ್ವಿಸಸ್‌ನ ಮುಖ್ಯ ಹೂಡಿಕೆ ತಜ್ಞ ವಿ.ಕೆ. ವಿಜಯ್‌ಕುಮಾರ್ ಹೇಳಿದ್ದಾರೆ.
ಈ ಅವಧಿಯಲ್ಲಿ ಸರ್ಕಾರದ ಸಾಲ ಪತ್ರಗಳಲ್ಲಿ ₹6,261 ಕೋಟಿ ಹೂಡಿಕೆಯಾಗಿದೆ. ಪ್ರಸಕ್ತ ವರ್ಷದ ಆರಂಭದಿಂದ ಇಲ್ಲಿಯವರೆಗೆ ಸಾಲ ಪತ್ರಗಳಲ್ಲಿ ₹97,249 ಕೋಟಿ ಹೂಡಿಕೆ ಆಗಿದೆ.