ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಪಿಐ: ಏಪ್ರಿಲ್‌ನಲ್ಲಿ ₹ 17,144 ಕೋಟಿ ಹೊರಹರಿವು

Last Updated 1 ಮೇ 2022, 11:11 IST
ಅಕ್ಷರ ಗಾತ್ರ

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ದೇಶದ ಷೇರುಪೇಟೆಗಳಲ್ಲಿ ಸತತ ಏಳನೇ ತಿಂಗಳಿನಲ್ಲಿಯೂ ಮಾರಾಟಕ್ಕೆ ಗಮನ ನೀಡಿದ್ದಾರೆ. ಏಪ್ರಿಲ್‌ನಲ್ಲಿ ₹ 17,144 ಕೋಟಿ ಮೊತ್ತದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಮಾರ್ಚ್‌ನಲ್ಲಿ ₹ 41,123 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದರು ಇದಕ್ಕೆ ಹೋಲಿಸಿದರೆ ಏಪ್ರಿಲ್‌ನಲ್ಲಿ ಹೊರಹರಿವು ಕಡಿಮೆ ಆಗಿದೆ. ಸಾಲಪತ್ರ ಮಾರುಕಟ್ಟೆಯಿಂದಲೂ ವಿದೇಶಿ ಹೂಡಿಕೆದಾರರು ₹ 4,439 ಕೋಟಿ ಬಂಡವಾಳ ಹಿಂದಕ್ಕೆ ಪಡೆದಿದ್ದಾರೆ.

ಅಮೆರಿಕದ ಫೆಡರಲ್‌ ರಿಸರ್ವ್‌ ಹೆಚ್ಚಿನ ಪ್ರಮಾಣದಲ್ಲಿ ಬಡ್ಡಿದರ ಏರಿಕೆ ಮಾಡುವ ಸಾಧ್ಯತೆ ವ್ಯಕ್ತವಾಗಿರುವುದು ಹೂಡಿಕೆದಾರರಲ್ಲಿ ಆತಂಕ ಮೂಡಿಸಿದೆ. ಹೀಗಾಗಿ ಬಂಡವಾಳ ಹೊರಹರಿವು ಹೆಚ್ಚಾಗುತ್ತಿದೆ. ಕಚ್ಚಾ ತೈಲ ದರ ಏರಿಕೆ ಮತ್ತು ಹಣದುಬ್ಬರ ಹೆಚ್ಚಾಗುತ್ತಿರುವುದರಿಂದ ಅಲ್ಪಾವಧಿಯಲ್ಲಿ ಬಂಡವಾಳ ಒಳಹರಿವು ಅನಿಶ್ಚಿತತೆಯಿಂದ ಕೂಡಿರಲಿದೆ ಎಂದು ತಜ್ಞರು ಹೇಳಿದ್ದಾರೆ.

ರಷ್ಯಾ–ಉಕ್ರೇನ್‌ ಸಂಘರ್ಷ, ಕಚ್ಚಾ ತೈಲ ದರ ಏರಿಕೆ ಮತ್ತು ಕಾರ್ಪೊರೇಟ್‌ ಕಂಪನಿಗಳ ಆರ್ಥಿಕ ಸಾಧನೆಯು ಮಾರುಕಟ್ಟೆ ನಿರೀಕ್ಷೆಗಿಂತ ಕಡಿಮೆ ಇರುವುದು, ಚೀನಾದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತಿರುವುದು... ಈ ಎಲ್ಲಾ ಬೆಳವಣಿಗೆಗೆಳಿಂದಾಗಿ ವಿದೇಶಿ ಹೂಡಿಕೆದಾರರನ್ನು ಹೂಡಿಕೆಯಿಂದ ಹಿಂದೆ ಸರಿಯುವಂತೆ ಮಾಡುತ್ತಿವೆ ಎಂದು ಮಾರ್ನಿಂಗ್‌ಸ್ಟಾರ್‌ ಇಂಡಿಯಾದ ಸಹಾಯಕ ನಿರ್ದೇಶಕ ಹಿಮಾಂಶು ಶ್ರೀವಾಸ್ತವ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT