ವಂಚನೆ: ಸರ್ಕಾರಿ ಬ್ಯಾಂಕ್‌ಗಳ ಪಾಲೇ ಹೆಚ್ಚು

ನವದೆಹಲಿ: ದೇಶದ ಬ್ಯಾಂಕಿಂಗ್ ವಲಯದಲ್ಲಿ ನಡೆಯುತ್ತಿರುವ ವಂಚನೆ ಪ್ರಕರಣಗಳಲ್ಲಿ ಖಾಸಗಿ ಬ್ಯಾಂಕ್‌ಗಳಿಗೆ ಹೋಲಿಸಿದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ ಆಗಿರುವ ವಂಚನೆಯ ಮೊತ್ತ ಹೆಚ್ಚಿನದ್ದಾಗಿದೆ ಎಂದು ಆರ್‌ಬಿಐನ ವಾರ್ಷಿಕ ವರದಿಯಲ್ಲಿ ಹೇಳಲಾಗಿದೆ.
2021–22ರಲ್ಲಿ ಆಗಿರುವ ಒಟ್ಟಾರೆ ಬ್ಯಾಂಕಿಂಗ್ ವಂಚನೆಯಲ್ಲಿ ಖಾಸಗಿ ಬ್ಯಾಂಕ್‌ಗಳ ಪಾಲು ಶೇ 58.8ರಷ್ಟು ಇದ್ದರೆ ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಪಾಲು ಶೇ 67ರಷ್ಟು ಇದೆ ಎಂದು ತಿಳಿಸಿದೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳಲ್ಲಿ 3,100 ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟಾರೆ ₹ 40 ಸಾವಿರ ಕೋಟಿಗೂ ಅಧಿಕ ಮೊತ್ತದ ವಂಚನೆ ಆಗಿದೆ. ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ 5 ಸಾವಿರಕ್ಕೂ ಅಧಿಕ ವಂಚನೆ ಪ್ರಕರಣಗಳು ನಡೆದಿದ್ದು, ಮೊತ್ತವು ಸರ್ಕಾರಿ ಬ್ಯಾಂಕ್‌ಗಳಿಗಿಂತಲೂ ಅರ್ಧಕ್ಕಿಂತಲೂ ಕಡಿಮೆ ಇದೆ ಎಂದು ವರದಿ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.