ನವದೆಹಲಿ: ‘ದೇಶದ ವಿವಿಧೆಡೆ ನೆಸ್ಲೆ ಇಂಡಿಯಾ ಕಂಪನಿಯ ಶಿಶು ಆಹಾರವಾದ ‘ಸೆರೆಲಾಕ್’ನ ಮಾದರಿಯನ್ನು ಸಂಗ್ರಹಿಸಲಾಗುತ್ತಿದೆ’ ಎಂದು ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ (ಎಫ್‌ಎಸ್‌ಎಸ್‌ಎಐ) ಸಿಇಒ ಜಿ. ಕಮಲಾ ವರ್ಧನ ರಾವ್ ತಿಳಿಸಿದ್ದಾರೆ.

ಭಾರತೀಯ ವಾಣಿಜ್ಯೋದ್ಯಮ ಮಹಾಸಂಘವು ಆಹಾರದ ಸಾರವರ್ಧನೆ ಕುರಿತು ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಇನ್ನು 15ರಿಂದ 20 ದಿನದೊಳಗೆ ಮಾದರಿ ಸಂಗ್ರಹಿಸುವ ಪ್ರಕ್ರಿಯೆಯು ಪೂರ್ಣಗೊಳ್ಳಲಿದೆ’ ಎಂದರು.

‘ಮನುಷ್ಯನ ಆರೋಗ್ಯ ವೃದ್ಧಿಗೆ ಅಕ್ಕಿ ಹೊರತಾಗಿ ಸಿರಿಧಾನ್ಯಗಳು ಹಾಗೂ ಇತರೆ ಆಹಾರ ಪದಾರ್ಥಗಳು ಸಹಕಾರಿಯಾಗಿವೆ. ಈ ನಿಟ್ಟಿನಲ್ಲಿ ಎಫ್‌ಎಂಸಿಜಿ ಕಂಪನಿಗಳು ಸಿರಿಧಾನ್ಯ ಪದಾರ್ಥಗಳನ್ನು ಪರಿಚಯಿಸಿವೆ’ ಎಂದರು.

ನೆಸ್ಲೆ ಕಂಪನಿಯು ಭಾರತದಲ್ಲಿ ಮಾರಾಟ ಮಾಡುವ ಶಿಶು ಆಹಾರದ ಉತ್ಪನ್ನಗಳಲ್ಲಿ ಹೆಚ್ಚುವರಿ ಸಕ್ಕರೆಯನ್ನು ಬೆರೆಸುತ್ತಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಧಿಕಾರವು ತನಿಖೆ ಕೈಗೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.