ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ದಪ‍್ಪ ಅಕ್ಷರದಲ್ಲಿ ಸಕ್ಕರೆ, ಉಪ್ಪು ಮಾಹಿತಿ ನಮೂದು ಕಡ್ಡಾಯ

Published 7 ಜುಲೈ 2024, 15:47 IST
Last Updated 7 ಜುಲೈ 2024, 15:47 IST
ಅಕ್ಷರ ಗಾತ್ರ

ನವದೆಹಲಿ: ಪ್ಯಾಕಿಂಗ್‌ ಮಾಡಿದ ಆಹಾರ ಪದಾರ್ಥಗಳಲ್ಲಿ ಇರುವ ಪೋಷಕಾಂಶಗಳ ಪ್ರಮಾಣ ಕುರಿತ ಮಾಹಿತಿಯನ್ನು ದಪ್ಪ ಅಕ್ಷರಗಳಲ್ಲಿ ಮುದ್ರಿಸುವುದಕ್ಕೆ ಸಂಬಂಧಿಸಿದಂತೆ ಭಾರತದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರವು (ಎಫ್‌ಎಸ್‌ಎಸ್‌ಎಐ) ಕರಡು ಅಧಿಸೂಚನೆ ಪ್ರಕಟಿಸಿದೆ.

ಆಹಾರ ಪೊಟ್ಟಣಗಳ ಮೇಲೆ ಶೇಕಡಾವಾರು ಎಷ್ಟು ಪ್ರಮಾಣದಲ್ಲಿ ಉಪ್ಪು, ಸಕ್ಕರೆ ಮತ್ತು ಕೊಬ್ಬಿನಾಂಶ ಇದೆ ಎಂಬ ಬಗೆಗಿನ ಸಂಖ್ಯೆಗಳನ್ನೂ ದಪ್ಪ ಅಕ್ಷರಗಳಲ್ಲಿ ಮುದ್ರಿಸಬೇಕಿದೆ. ಈ ಕುರಿತು ಅಭಿಪ್ರಾಯ ಸಲ್ಲಿಸಲು ಮಧ್ಯಸ್ಥಗಾರರಿಗೆ ಕೋರಿದೆ. 

ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಲೇಬಲಿಂಗ್‌ ಮತ್ತು ಡಿಸ್‌ಪ್ಲೇ) ನಿಯಮಾವಳಿ 2020ಕ್ಕೆ ತಿದ್ದುಪಡಿ ತರಲಾಗಿದೆ. ಇತ್ತೀಚೆಗೆ ಪ್ರಾಧಿಕಾರದ ಅಧ್ಯಕ್ಷ ಅಪೂರ್ವ ಚಂದ್ರ ಅವರ ಅಧ್ಯಕ್ಷತೆಯಲ್ಲಿ ನಡೆದ 44ನೇ ಸಭೆಯಲ್ಲಿ ಈ ಕುರಿತು ಚರ್ಚಿಸಿ ಕರಡು ಅಧಿಸೂಚನೆ ಪ್ರಕಟಿಸಲಾಗಿದೆ.

ಗ್ರಾಹಕರು ತಾವು ಬಳಸುವ ಆಹಾರದ ಪೊಟ್ಟಣಗಳಲ್ಲಿ ಇರುವ ಪೋಷಕಾಂಶಗಳ ಮೌಲ್ಯದ ಬಗ್ಗೆ ತಿಳಿದುಕೊಳ್ಳಬೇಕು. ಈ ಪದಾರ್ಥಗಳು ಆರೋಗ್ಯಕರವಾಗಿವೆಯೇ ಎಂಬ ಬಗ್ಗೆ ಖಚಿತಪಡಿಸಿಕೊಳ್ಳುವ ಅಗತ್ಯವಿದೆ. ಇದಕ್ಕೆ ನೆರವಾಗಲು ತಿದ್ದುಪಡಿ ತರಲಾಗಿದೆ ಎಂದು ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT