ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆಟ್ರೋಲ್ ಬೆಲೆ ಮತ್ತೆ ಏರಿಕೆ, ಎರಡು ತಿಂಗಳ ಬಳಿಕ ಡೀಸೆಲ್ ಬೆಲೆ ಇಳಿಕೆ

ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಸೋಮವಾರ (ಜು.12) ಇಂಧನ ದರವನ್ನು ಹೆಚ್ಚಿಸಿವೆ. ಕಳೆದ ಎರಡು ತಿಂಗಳಲ್ಲಿ ಇದೇ ಮೊದಲ ಬಾರಿಗೆ ಡೀಸೆಲ್ ಬೆಲೆ ಇಳಿಕೆಯಾಗಿದ್ದು, ಲೀಟರ್‌ಗೆ 14-16 ಪೈಸೆ ಕಡಿಮೆಯಾಗಿದೆ. ಪೆಟ್ರೋಲ್‌ ದರ ಲೀಟರಿಗೆ 28-30 ಪೈಸೆ ಏರಿಕೆಯಾಗಿದೆ.

ಮುಂಬೈನಲ್ಲಿ ಪೆಟ್ರೋಲ್‌ ದರ ಲೀಟರಿಗೆ ₹ 106.59 ಮತ್ತು ಡೀಸೆಲ್‌ ದರ ₹ 97.18ಕ್ಕೆ ತಲುಪಿದೆ. ದೆಹಲಿಯಲ್ಲಿ ಪೆಟ್ರೋಲ್‌ ದರ ಲೀಟರಿಗೆ ₹ 107.20 ಮತ್ತು ಡೀಸೆಲ್‌ ₹ 97.29ಕ್ಕೆ ಮಾರಾಟವಾಗುತ್ತಿದೆ. ಬೆಂಗಳೂರಿನಲ್ಲಿ ಪೆಟ್ರೋಲ್‌ ಲೀಟರಿಗೆ ₹ 104.58 ಮತ್ತು ಡೀಸೆಲ್‌ ದರ ಲೀಟರಿಗೆ ₹ 95.09ನಷ್ಟಿದೆ.

ಸಾಮಾನ್ಯ ಜನರಿಗೆ ಪ್ರತಿದಿನ ಬೆಲೆ ಏರಿಕೆಯ ಬಿಸಿ ತಟ್ಟುತ್ತಿದೆ. ಇತ್ತೀಚೆಗಷ್ಟೇ ಹಾಲಿನ ಬೆಲೆಯನ್ನೂ ಹೆಚ್ಚಿಸಲಾಗಿದೆ. ಇಂಧನದ ಮೇಲಿನ ಬೆಲೆಯನ್ನು ಕಡಿಮೆ ಮಾಡಬೇಕೆಂದು ಸ್ಥಳೀಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT