ಮಂಗಳವಾರ, ಮೇ 17, 2022
25 °C

ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ: ಬೆಂಗಳೂರಿನಲ್ಲೆಷ್ಟಿದೆ ದರ?

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Fuel prices hiked

ನವದೆಹಲಿ: ಇಂಧನ ದರ ಬುಧವಾರ ಮತ್ತೆ ಏರಿಕೆಯಾಗಿದೆ. ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 70 ಪೈಸೆ ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 27 ಪೈಸೆ ಹೆಚ್ಚಾಗಿದೆ.

ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ₹87.60 ಆಗಿದ್ದು, ಡೀಸೆಲ್ ಬೆಲೆ ₹77.73 ಆಗಿದೆ. ಮುಂಬೈಯಲ್ಲಿ ಪೆಟ್ರೋಲ್ ದರ ₹95ರ ಸನಿಹ ತಲುಪಿದೆ. ಇಂದಿನ ಏರಿಕೆಯೊಂದಿಗೆ ₹94.12 ಆಗಿದೆ. ಡೀಸೆಲ್ ದರ ₹84.63 ಆಗಿದೆ.

ಓದಿ: Explainer: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚುತ್ತಲೇ ಇರುವುದು ಏಕೆ?

ಬೆಂಗಳೂರಿನಲ್ಲಿ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ ₹90.53 ಆಗಿದ್ದು, ಡೀಸೆಲ್ ದರ ಪ್ರತಿ ಲೀಟರ್‌ಗೆ 82.40 ಆಗಿದೆ.

ಬ್ರೆಂಟ್ ಕಚ್ಚಾ ತೈಲ ಬೆಲೆ ಸೋಮವಾರ ಪ್ರತಿ ಬ್ಯಾರಲ್‌‌ಗೆ 60 ಡಾಲರ್ ತಲುಪಿತ್ತು. ಇದು ಈ ವರ್ಷದ ಗರಿಷ್ಠವಾಗಿದೆ. ಹೆಚ್ಚುತ್ತಿರುವ ಕಚ್ಚಾ ತೈಲ ಬೆಲೆಯು ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಮೇಲೆ ಪರಿಣಾಮ ಬೀರುತ್ತಿದೆ.

ಓದಿ: 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು