ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂಧನ ದರ ಏರಿಕೆ – ಕೇಂದ್ರ, ರಾಜ್ಯಗಳು ಒಟ್ಟಾಗಿ ಸಮಸ್ಯೆ ನಿವಾರಿಸಬೇಕಿದೆ: ನಿರ್ಮಲಾ

Last Updated 5 ಅಕ್ಟೋಬರ್ 2021, 16:14 IST
ಅಕ್ಷರ ಗಾತ್ರ

ರಾಯ್‌ಪುರ: ದೇಶದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ದರ ಅಂತರರಾಷ್ಟ್ರೀಯ ತೈಲ ದರದ ಮೇಲೆ ಅವಲಂಬಿತವಾಗಿದೆ. ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಇಂಧನ ದರ ಏರಿಕೆಯ ಸಮಸ್ಯೆಯನ್ನು ನಿಭಾಯಿಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಇಂಧನ ದರ ಹೆಚ್ಚಾಗುತ್ತಿದೆ. ಇದರಿಂದ ಖಂಡಿತವಾಗಿಯೂ ಜನಸಾಮಾನ್ಯರ ಮೇಲೆ ಹೊರೆಯಾಗುತ್ತಿದೆ. ದರ ಏರಿಕೆ ಸಮಸ್ಯೆಯನ್ನು ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿಯೇ ನಿವಾರಿಸಬೇಕಿದೆ’ ಎಂದಿದ್ದಾರೆ.

ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲೆ ಕೇಂದ್ರ ಸರ್ಕಾರ ಮಾತ್ರವೇ ಸುಂಕ, ತೆರಿಗೆ ವಿಧಿಸುತ್ತಿಲ್ಲ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT