ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸ ಮಾಡಲು ಅವಕಾಶ ಕೊಡಿ: ಗಾರ್ಮೆಂಟ್ಸ್ ಉದ್ಯಮದಿಂದ ಸಿ.ಎಂ.ಗೆ ಮನವಿ

Last Updated 27 ಏಪ್ರಿಲ್ 2021, 16:56 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಕೃಷಿ ನಂತರ ಅತಿಹೆಚ್ಚಿನ ಸಂಖ್ಯೆಯ ಜನರಿಗೆ ಉದ್ಯೋಗ ಕಲ್ಪಿಸಿರುವ ಗಾರ್ಮೆಂಟ್‌ ವಲಯಕ್ಕೆ ಕೋವಿಡ್ ಕರ್ಫ್ಯೂ ಅವಧಿಯಲ್ಲಿ ಶೇಕಡ 50ರಷ್ಟು ಮಾನವ ಸಂಪನ್ಮೂಲ ಬಳಸಿಕೊಂಡು ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಬೇಕು’ ಎಂದು ರಾಜ್ಯ ಸರ್ಕಾರಕ್ಕೆ ‘ಕರ್ನಾಟಕ ಉದ್ಯೋಗದಾತರ ಒಕ್ಕೂಟ’ ಮನವಿ ಮಾಡಿದೆ.

ಬೆಂಗಳೂರಿನಲ್ಲಿಯೇ ಎಂಟು ಲಕ್ಷಕ್ಕಿಂತ ಹೆಚ್ಚು ಜನ ಗಾರ್ಮೆಂಟ್ ವಲಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಯುರೋಪಿನಲ್ಲಿ ಮಾರುಕಟ್ಟೆ ಈಗಷ್ಟೇ ತೆರೆದುಕೊಂಡಿದೆ. ಅಲ್ಲಿಂದ ದೊಡ್ಡ ಸಂಖ್ಯೆಯಲ್ಲಿ ವಸ್ತ್ರ, ಉಡುಪು ಸಿದ್ಧಪಡಿಸುವಂತೆ ಕೋರಿಕೆ ಬಂದಿದೆ. ಈ ಸಂದರ್ಭದಲ್ಲಿ ಕಾಲಮಿತಿಯಲ್ಲಿ ಸಿದ್ಧಪಡಿಸಿ ಕೊಡದಿದ್ದರೆ ಗಾರ್ಮೆಂಟ್ಸ್ ಉದ್ಯಮವು ಭಾರಿ ದಂಡ ತೆರಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರದಲ್ಲಿ ಒಕ್ಕೂಟದ ಅಧ್ಯಕ್ಷ ಬಿ.ಸಿ. ಪ್ರಭಾಕರ್ ಮನವಿ ಮಾಡಿದ್ದಾರೆ.

ಗಾರ್ಮೆಂಟ್ಸ್‌ ಉದ್ಯಮವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸುವುದರಿಂದ ಹತ್ತಿ ಬೆಳೆಗಾರರಿಗೂ ನಷ್ಟ ಆಗುತ್ತದೆ. ಬೇರೆ ಬೇರೆ ಕಡೆಗಳಿಂದ ತರಿಸಿಕೊಳ್ಳಬೇಕಿರುವ ಕಚ್ಚಾ ವಸ್ತುಗಳನ್ನು ಇಳಿಸಿಕೊಳ್ಳಲೂ ಆಗುವುದಿಲ್ಲ ಎಂದು ಪತ್ರದಲ್ಲಿ ವಿವರಿಸಲಾಗಿದೆ.

ಗಾರ್ಮೆಂಟ್ಸ್‌ ಉದ್ಯಮವು ಮಾಸ್ಕ್‌, ಪಿಪಿಇ ಕಿಟ್ ತಯಾರಿಕೆಯಲ್ಲಿ ಕೂಡ ತೊಡಗಿವೆ. ಹಾಗಾಗಿ ಈ ಉದ್ಯಮವು ಕಾರ್ಯ ನಿರ್ವಹಿಸಲು ಅವಕಾಶ ಕಲ್ಪಿಸಬೇಕು ಎಂದು ಸಿದ್ಧಉಡುಪು ರಫ್ತು ಉತ್ತೇಜನಾ ಮಂಡಳಿಯ ಅಧ್ಯಕ್ಷ ಡಾ.ಎ. ಶಕ್ತಿವೇಲು ಅವರು ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT