ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಡಿಪಿ: ಶೇ 6.8ರಷ್ಟು ಪ್ರಗತಿ ನಿರೀಕ್ಷೆ

Published 26 ಮಾರ್ಚ್ 2024, 16:17 IST
Last Updated 26 ಮಾರ್ಚ್ 2024, 16:17 IST
ಅಕ್ಷರ ಗಾತ್ರ

ನವದೆಹಲಿ: ಜಾಗತಿಕ ರೇಟಿಂಗ್‌ ಸಂಸ್ಥೆಯಾದ ಎಸ್‌ ಆ್ಯಂಡ್‌ ಪಿ, 2024–25ನೇ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ (ಜಿಡಿಪಿ) ಬೆಳವಣಿಗೆಯನ್ನು ಪರಿಷ್ಕರಿಸಿದ್ದು, ಶೇ 6.8ರಷ್ಟು ಪ್ರಗತಿ ಕಾಣಲಿದೆ ಎಂದು ಅಂದಾಜಿಸಿದೆ.  

ಕಳೆದ ನವೆಂಬರ್‌ನಲ್ಲಿ ಬಿಡುಗಡೆಗೊಳಿಸಿದ್ದ ವರದಿಯಲ್ಲಿ ಶೇ 6.4ರಷ್ಟು ಬೆಳವಣಿಗೆ ದಾಖಲಿಸಲಿದೆ ಎಂದು ಹೇಳಿತ್ತು. 

2023–24ನೇ ಹಣಕಾಸು ವರ್ಷದಲ್ಲಿ ಜಿಡಿಪಿಯು ಶೇ 7.6ರಷ್ಟು ದಾಖಲಾಗಲಿದೆ ಎಂದು ಅಂದಾಜಿಸಲಾಗಿದೆ. 

ಭಾರತ, ಇಂಡೊನೇಷ್ಯಾ, ಫಿಲಿಪ್ಪೀನ್‌ ಹಾಗೂ ವಿಯೆಟ್ನಾಂನ ಆರ್ಥಿಕತೆಯು ಉತ್ತಮ ಬೆಳವಣಿಗೆ ದಾಖಲಿಸಲಿವೆ ಎಂದು ಹೇಳಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT