ಗುರುವಾರ , ಏಪ್ರಿಲ್ 2, 2020
19 °C

2019ರ ಅಕ್ಟ್ರೋಬರ್‌–ಡಿಸೆಂಬರ್‌ ಜಿಡಿಪಿ ಶೇ 4.7

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಜಿಡಿಪಿ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಮೂರನೇ ತ್ರೈಮಾಸಿಕದಲ್ಲಿ (ಅಕ್ಟೋಬರ್‌–ಡಿಸೆಂಬರ್‌) ದೇಶದ ಆರ್ಥಿಕ ವೃದ್ಧಿ ದರವು (ಜಿಡಿಪಿ) ಶೇ 4.7ರಷ್ಟು ಬೆಳವಣಿಗೆ ಕಂಡಿರುವುದಾಗಿ ಬಿಡುಗಡೆಯಾಗಿರುವ ಅಂಕಿ–ಅಂಶಗಳಿಂದ ತಿಳಿದು ಬಂದಿದೆ.

ಎರಡನೇ ತ್ರೈಮಾಸಿಕದಲ್ಲಿ ಜಿಡಿಪಿ ಆರು ವರ್ಷಗಳ ಕನಿಷ್ಠ ಮಟ್ಟ ಶೇ 4.5ಕ್ಕೆ ಕುಸಿದಿತ್ತು. ಶುಕ್ರವಾರ ಬಿಡುಗಡೆ ಮಾಡಲಾಗಿರುವ ಅಂಕಿ–ಅಂಶಗಳ ಪ್ರಕಾರ, 2019ರ ಜುಲೈ–ಸೆಪ್ಟೆಂಬರ್ ತ್ರೈಮಾಸಿಕದ ಜಿಡಿಪಿ ಶೇ 4.5ರಿಂದ ಶೇ 5.1ಕ್ಕೆ ಪರಿಷ್ಕರಿಸಲಾಗಿದೆ. 

2013ರ ಜನವರಿ–ಮಾರ್ಚ್‌ ಅವಧಿಯಲ್ಲಿ ಜಿಡಿಪಿ ವೃದ್ಧಿ ಶೇ 4.3ರಷ್ಟಿತ್ತು. 2018ರ ಜುಲೈ–ಸೆಪ್ಟೆಂಬರ್‌ನಲ್ಲಿ ಶೇ 7ರಷ್ಟಿದ್ದ ಆರ್ಥಿಕ ವೃದ್ಧಿ ದರ 2019ರಲ್ಲಿ ಕುಸಿದಿದೆ. 

ದೇಶದ ಆರ್ಥಿಕತೆಯು 2019–20ನೇ ಹಣಕಾಸು ವರ್ಷದಲ್ಲಿ ಶೇ 5ರಷ್ಟು ಬೆಳವಣಿಗೆ ದಾಖಲಿಸಲಿದೆ ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು (ಎನ್‌ಎಸ್‌ಒ) ಅಂದಾಜಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು