ಮುಂಬೈ: ‘ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಶೇ 7ಕ್ಕೆ ತಲುಪುವ ಸಾಧ್ಯತೆ ಇದೆ’ ಎಂದು ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ (ಸಿಇಎ) ವಿ. ಅನಂತ ನಾಗೇಶ್ವರನ್ ಹೇಳಿದ್ದಾರೆ.

ಮೂರು ಜಾಗತಿಕ ರೇಟಿಂಗ್ ಸಂಸ್ಥೆಗಳು ಇತ್ತೀಚೆಗೆ ದೇಶದ ರೇಟಿಂಗ್ ಹೆಚ್ಚಿಸಿವೆ. ದೇಶವು ಇದೇ ಪಥದಲ್ಲಿ ಮುಂದುವರಿದರೆ ಶೀಘ್ರ ‘ಎ’ ರೇಟಿಂಗ್ ವರ್ಗಕ್ಕೆ ಸೇರ್ಪಡೆ ಆಗಬಹುದು ಎಂದು ಬುಧವಾರ ನಡೆದ ಕಾರ್ಯಕ್ರಮದಲ್ಲಿ ಹೇಳಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ತೆಗೆದುಕೊಂಡ ಕ್ರಮಗಳು ದೇಶದ ಆರ್ಥಿಕತೆಯನ್ನು ‘ಆರಾಮದಾಯಕ ಸ್ಥಾನದಲ್ಲಿ’ ಇರಿಸುತ್ತವೆ. ಆದಾಯ ತೆರಿಗೆ ವಿನಾಯಿತಿ ಮತ್ತು ಜಿಎಸ್ಟಿ ಇಳಿಕೆಯಂತಹ ಆರ್ಥಿಕ ಕ್ರಮಗಳು ದೇಶದ ಆರ್ಥಿಕ ಪ್ರಗತಿಯನ್ನು ಹೆಚ್ಚಿಸಲಿವೆ ಎಂದು ಹೇಳಿದ್ದಾರೆ.

ಪ್ರಸಕ್ತ ಆರ್ಥಿಕ ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆ ಶೇ 6.3ಕ್ಕೆ ಇಳಿಕೆ ಆಗಬಹುದು ಎಂದು ಫೆಬ್ರುವರಿಯಲ್ಲಿ ಅನಂತ ನಾಗೇಶ್ವರನ್ ಹೇಳಿದ್ದರು. ಅಮೆರಿಕದ ಸುಂಕದಿಂದ ಜಿಡಿಪಿ ಶೇ 6ಕ್ಕೆ ಇಳಿಯುವ ನಿರೀಕ್ಷೆ ಇದೆ ಎಂದು ಹೇಳಿದ್ದರು.