ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಂಬೈನಲ್ಲಿ 8ನೇ ಜಾಗತಿಕ ಆರ್ಥಿಕ ಶೃಂಗಮೇಳ

Last Updated 27 ಫೆಬ್ರುವರಿ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ಮುಂಬೈನ ವರ್ಲ್ಡ್‌ ಟ್ರೇಡ್‌ ಸೆಂಟರ್‌ ಮತ್ತು ಕೈಗಾರಿಕೆಗಳ ಅಖಿಲ ಭಾರತ ಸಂಘದ (ಎಐಎಐ) ಆಶ್ರಯದಲ್ಲಿ ಮಾರ್ಚ್‌ 6ರಿಂದ 8ರವರೆಗೆ 8ನೇ ಜಾಗತಿಕ ಆರ್ಥಿಕ ಶೃಂಗಸಭೆಯು (ಜಿಇಎಸ್‌) ನಡೆಯಲಿದೆ.

ಈ ಅಂತರರಾಷ್ಟ್ರೀಯ ಶೃಂಗಸಭೆಯಲ್ಲಿ ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದ ಬೆಳವಣಿಗೆಗೆ ನೆರವಾಗಲಿರುವ ಸೇವೆಗಳ ಬಗ್ಗೆ ಪ್ರಮುಖವಾಗಿ ಚರ್ಚೆಯಾಗಲಿದೆ.

ಅಂತರರಾಷ್ಟ್ರೀಯ ವ್ಯಾಪಾರದಲ್ಲಿ ಕಿರು, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್‌ಎಂಇ) ಸ್ಪರ್ಧಾತ್ಮಕತೆ ಹೆಚ್ಚಿಸಲು ನೆರವಾಗುವುದು ಈ ಶೃಂಗಸಭೆಯ ಉದ್ದೇಶವಾಗಿದೆ.

ಈ ವಾಣಿಜ್ಯ ಮೇಳಕ್ಕೆ 25 ದೇಶಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅನೇಕ ಆರ್ಥಿಕ ತಜ್ಞರು ಭಾಗವಹಿಸಲಿದ್ದಾರೆ.

ಬೆಂಗಳೂರಿನ ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮ್ಯಾನೇಜ್‌ಮೆಂಟ್‌ ಈ ಶೃಂಗಸಭೆಯ ಪಾಲುದಾರ ಸಂಸ್ಥೆಗಳಲ್ಲಿ ಒಂದಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT