ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬಾಂಡ್‌: ಗ್ರಾಂಗೆ ₹ 3,196 ನಿಗದಿ

Last Updated 1 ಜೂನ್ 2019, 19:45 IST
ಅಕ್ಷರ ಗಾತ್ರ

ನವದೆಹಲಿ: ಸೋಮವಾರದಿಂದ ಖರೀದಿಗೆ ಲಭ್ಯವಾಗಲಿರುವಚಿನ್ನದಬಾಂಡ್‌ಗಳ (ಎಸ್‌ಜಿಬಿ) ಬೆಲೆಯನ್ನು ಕೇಂದ್ರ ಸರ್ಕಾರ ಪ್ರತಿ ಗ್ರಾಂಗೆ₹ 3,196 ರಂತೆ ನಿಗದಿಪಡಿಸಿದೆ.

ಆನ್‌ಲೈನ್‌ನಲ್ಲಿ ಖರೀದಿಸುವವರು ಮತ್ತು ನಗದುರಹಿತ (ಡಿಜಿಟಲ್‌) ರೂಪದಲ್ಲಿ ಪಾವತಿಸುವವರಿಗೆಬಾಂಡ್‌ನನೀಡಿಕೆಬೆಲೆಯಲ್ಲಿ ಪ್ರತಿ ಗ್ರಾಂಗೆ₹ 50ರಂತೆ ಕಡಿತ ನೀಡಲು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ನಿರ್ಧರಿಸಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಈ ಹೂಡಿಕೆದಾರರಿಗೆ ಪ್ರತಿ ಗ್ರಾಂಚಿನ್ನದಬೆಲೆ₹ 3,146ರಂತೆ ಇರಲಿದೆ.

ಬ್ಯಾಂಕ್‌ಗಳು, ಆಯ್ದ ಅಂಚೆ ಕಚೇರಿಗಳು, ಸ್ಟಾಕ್‌ ಹೋಲ್ಡಿಂಗ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (ಎಸ್‌ಎಚ್‌ಸಿಐಎಲ್), ರಾಷ್ಟ್ರೀಯ ಮತ್ತು ಮುಂಬೈ ಷೇರು ವಿನಿಮಯ ಕೇಂದ್ರಗಳಲ್ಲಿ ಈಬಾಂಡ್‌ಗಳನ್ನು ಮಾರಾಟ ಮಾಡಲಾಗುವುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT