ಭಾನುವಾರ, ಜೂಲೈ 5, 2020
28 °C

2020–21ನೇ ಸಾಲಿನ ಚಿನ್ನದ ಬಾಂಡ್‌ ಯೋಜನೆ ಏಪ್ರಿಲ್‌ 20ರಿಂದ ಆರಂಭ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಕೇಂದ್ರ ಸರ್ಕಾರವು 2020–21ನೇ ಸಾಲಿನ ಚಿನ್ನದ ಬಾಂಡ್‌ ಯೋಜನೆಯನ್ನು ಏಪ್ರಿಲ್‌ 20ರಿಂದ ಆರಂಭಿಸಲಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ತಿಳಿಸಿದೆ.

ಏಪ್ರಿಲ್‌ 20ರಿಂದ ಸೆಪ್ಟೆಂಬರ್‌ವರೆಗೆ ಒಟ್ಟಾರೆ ಆರು ಕಂತುಗಳಲ್ಲಿ ಚಿನ್ನದ ಬಾಂಡ್‌ ವಿತರಣೆ ಆಗಲಿದ್ದು, ಕನಿಷ್ಠ 1 ಗ್ರಾಂನಿಂದ ಹೂಡಿಕೆ ಆರಂಭವಾಗಲಿದೆ. ಶೇ 99.9 ಪರಿಶುದ್ಧತೆಯ ಚಿನ್ನದ ಸರಾಸರಿ ದರದ ಆಧಾರದ ಮೇಲೆ ನೀಡಿಕೆ ಬೆಲೆ ನಿಗದಿಪಡಿಸಲಾಗುತ್ತದೆ.

ಭೌತಿಕ ರೂಪದಲ್ಲಿ ನಿಷ್ಪ್ರಯೋಜಕವಾಗಿರುವ ಚಿನ್ನವನ್ನು ಬಳಕೆಗೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರ 2015ರಲ್ಲಿ ಚಿನ್ನದ ಬಾಂಡ್‌ ಯೋಜನೆ ಜಾರಿಗೆ ತಂದಿತ್ತು. ಬ್ಯಾಂಕ್‌ಗಳು, ಆಯ್ದ ಅಂಚೆ ಕಚೇರಿಗಳು, ಸ್ಟಾಕ್‌ ಹೋಲ್ಡಿಂಗ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ (ಎಸ್‌ಎಚ್‌ಸಿಐಎಲ್), ರಾಷ್ಟ್ರೀಯ ಮತ್ತು ಮುಂಬೈ ಷೇರು ವಿನಿಮಯ ಕೇಂದ್ರಗಳಲ್ಲಿ ಈ ಬಾಂಡ್‌ಗಳನ್ನು ಮಾರಾಟ ಮಾಡಲಾಗುವುದು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು