ಸೋಮವಾರದಿಂದ ಚಿನ್ನದ ಬಾಂಡ್‌ನ ನಾಲ್ಕನೇ ಕಂತು ಆರಂಭ

ಮುಂಬೈ: 2020–21ನೇ ಸಾಲಿನ ಚಿನ್ನದ ಬಾಂಡ್‌ನ ನಾಲ್ಕನೇ ಕಂತು ಸೋಮವಾರದಿಂದ ಆರಂಭವಾಗಲಿದ್ದು, ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನೀಡಿಕೆ ದರವನ್ನು ಪ್ರತಿ ಗ್ರಾಂಗೆ ₹ 4,852 ನಿಗದಿ ಮಾಡಿದೆ.
ಆನ್‌ಲೈನ್ ಮೂಲಕ ಬಾಂಡ್ ಖರೀದಿಗೆ ಹಣ ಪಾವತಿಸುವವರಿಗೆ ಪ್ರತಿ ಗ್ರಾಂಗೆ ₹ 50ರಂತೆ ವಿನಾಯಿತಿ ಸಿಗಲಿದೆ. ಹೀಗಾಗಿ ಇಂತಹ ಹೂಡಿಕೆದಾರರಿಗೆ ನೀಡಿಕೆ ಬೆಲೆ ₹ 4,802 ಇರಲಿದೆ.
2020ರ ಜೂನ್ 6ರಿಂದ 10ರವರೆಗೆ ಬಾಂಡ್ ಖರೀದಿಗೆ ಅವಕಾಶ ಇರಲಿದೆ.
ಏಪ್ರಿಲ್‌ನಿಂದ ಸೆಪ್ಟೆಂಬರ್ ಅವಧಿಯವರೆಗೆ ಆರು ಕಂತುಗಳ ಚಿನ್ನದ ಬಾಂಡ್ ವಿತರಣೆ ಮಾಡುವುದಾಗಿ ಆರ್‌ಬಿಐ ಏಪ್ರಿಲ್‌ನಲ್ಲಿ ಘೋಷಣೆ ಮಾಡಿತ್ತು. ಕೇಂದ್ರ ಸರ್ಕಾರದ ಸಮ್ಮುಖದಲ್ಲಿ ಆರ್‌ಬಿಐ ಈ ಬಾಂಡ್ಗಳನ್ನು ವಿತರಣೆ ಮಾಡಲಿದೆ.
ಭೌತಿಕ ರೂಪದಲ್ಲಿ ನಿಷ್ಪ್ರಯೋಜಕವಾಗಿರುವ ಚಿನ್ನವನ್ನು ಬಳಕೆಗೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರ 2015ರಲ್ಲಿ ಚಿನ್ನದ ಬಾಂಡ್ ಯೋಜನೆ ಜಾರಿಗೊಳಿಸಿತು. ಬ್ಯಾಂಕ್‌ಗಳು, ಆಯ್ದ ಅಂಚೆ ಕಚೇರಿಗಳು, ಸ್ಟಾಕ್ ಹೋಲ್ಡಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್‌ಎಚ್‌ಸಿಐಎಲ್), ರಾಷ್ಟ್ರೀಯ ಮತ್ತು ಮುಂಬೈ ಷೇರು ವಿನಿಮಯ ಕೇಂದ್ರಗಳಲ್ಲಿ ಈ ಬಾಂಡ್ಗಳನ್ನು ಮಾರಾಟ ಮಾಡಲಾಗುವುದು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.