ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಮವಾರದಿಂದ ಚಿನ್ನದ ಬಾಂಡ್‌ನ 8ನೇ ಕಂತು; ನೀಡಿಕೆ ಬೆಲೆ ಪ್ರತಿ ಗ್ರಾಂಗೆ ₹ 4,791

Last Updated 27 ನವೆಂಬರ್ 2021, 11:30 IST
ಅಕ್ಷರ ಗಾತ್ರ

ಮುಂಬೈ: ಚಿನ್ನದ ಬಾಂಡ್‌ ಯೋಜನೆಯ 2021–22ನೇ ಸಾಲಿನ 8ನೇ ಕಂತು ಸೋಮವಾರ ಆರಂಭ ಆಗಲಿದ್ದು, ಶುಕ್ರವಾರ ಮುಗಿಯಲಿದೆ. ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ನೀಡಿಕೆ ಬೆಲೆಯನ್ನು ಪ್ರತಿ ಗ್ರಾಂಗೆ ₹ 4,791ರಷ್ಟು ನಿಗದಿಪಡಿಸಿದೆ.

ಆನ್‌ಲೈನ್ ಮೂಲಕ ಬಾಂಡ್ ಖರೀದಿಗೆ ಅರ್ಜಿ ಸಲ್ಲಿಸುವವರಿಗೆ ₹ 50 ವಿನಾಯಿತಿ ಸಿಗಲಿದೆ. ಹೀಗಾಗಿ ಇವರಿಗೆ ಬಾಂಡ್ ಬೆಲೆಯು ಪ್ರತಿ ಗ್ರಾಂಗೆ ₹ 4,741 ಇರಲಿದೆ.

ಚಿನ್ನದ ಬಾಂಡ್‌ನ ಏಳನೇ ಕಂತಿನಲ್ಲಿ ಪ್ರತಿ ಗ್ರಾಂಗೆ ನೀಡಿಕೆ ಬೆಲೆಯನ್ನು ₹ 4,761ಕ್ಕೆ ನಿಗದಿಪಡಿಸಲಾಗಿತ್ತು. ಬ್ಯಾಂಕುಗಳು (ಕಿರು ಹಣಕಾಸು ಬ್ಯಾಂಕ್ ಮತ್ತು ಪೇಮೆಂಟ್‌ ಬ್ಯಾಕ್ಸ್‌ ಹೊರತುಪಡಿಸಿ), ಸ್ಟಾಕ್‌ ಹೋಲ್ಡಿಂಗ್‌ ಕಾರ್ಪೊರೇಷನ್‌ ಆಫ್‌ ಇಂಡಿಯಾ, ಅಂಚೆ ಕಚೇರಿ, ಬಿಎಸ್‌ಇ ಮತ್ತು ಎನ್‌ಎಸ್ಇ ಮೂಲಕ ಚಿನ್ನದ ಬಾಂಡ್‌ ಮಾರಾಟ ನಡೆಯಲಿದೆ. ಕೇಂದ್ರ ಸರ್ಕಾರದ ಸಮ್ಮುಖದಲ್ಲಿ ಆರ್‌ಬಿಐ ಈ ಬಾಂಡ್‌ಗಳನ್ನು ವಿತರಣೆ ಮಾಡುತ್ತದೆ.

ಕನಿಷ್ಠ ಹೂಡಿಕೆ 1 ಗ್ರಾಂ ಇರಲಿದೆ. ವೈಯಕ್ತಿಕ ಖರೀದಿದಾರರಿಗೆ ಮತ್ತು ಹಿಂದೂ ಅವಿಭಕ್ತ ಕುಟುಂಬಕ್ಕೆ 4 ಕೆ.ಜಿ ಹಾಗೂ ಟ್ರಸ್ಟ್‌ಗಳಿಗೆ 20 ಕೆ.ಜಿಯ ಗರಿಷ್ಠ ಮಿತಿ ನೀಡಲಾಗಿದೆ. ಭೌತಿಕ ರೂಪದಲ್ಲಿ ನಿಷ್ಪ್ರಯೋಜಕವಾಗಿರುವ ಚಿನ್ನವನ್ನು ಬಳಕೆಗೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರ 2015ರಲ್ಲಿ ಚಿನ್ನದ ಬಾಂಡ್‌ ಯೋಜನೆ ಜಾರಿಗೊಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT