ಚಿನ್ನದ ಬಾಂಡ್‌ನ ಮೂರನೇ ಕಂತು: ನೀಡಿಕೆ ಬೆಲೆ ಗ್ರಾಂಗೆ ₹5,409

ಮುಂಬೈ: ಚಿನ್ನದ ಬಾಂಡ್ ಯೋಜನೆಯ 2022–23ನೇ ಹಣಕಾಸು ವರ್ಷದ ಮೂರನೇ ಕಂತು ಸೋಮವಾರದಿಂದ ಆರಂಭ ಆಗಲಿದ್ದು, ನೀಡಿಕೆ ಬೆಲೆ ಪ್ರತಿ ಗ್ರಾಂಗೆ ₹5,409 ನಿಗದಿಪಡಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಶುಕ್ರವಾರ ತಿಳಿಸಿದೆ.
ಶುಕ್ರವಾರದವರೆಗೆ ಬಾಂಡ್ ಖರೀದಿಸಲು ಅವಕಾಶ ನೀಡಲಾಗಿದೆ. ಬಾಂಡ್ ಖರೀದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಪಾವತಿ ಮಾಡುವವರಿಗೆ ಪ್ರತಿ ಗ್ರಾಂಗೆ ₹ 50 ರಿಯಾಯಿತಿ ನೀಡಲಾಗುತ್ತದೆ. ಹೀಗಾಗಿ ಇಂತಹ ಹೂಡಿಕೆದಾರರಿಗೆ ಪ್ರತಿ ಗ್ರಾಂ ನೀಡಿಕೆ ಬೆಲೆ ₹ 5,359 ಆಗಲಿದೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಸ್ಟಾಕ್ ಹೋಲ್ಡಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಅಂಚೆ ಕಚೇರಿ, ಬಿಎಸ್‌ಇ ಮತ್ತು ಎನ್‌ಎಸ್ಇ ಮೂಲಕ ಚಿನ್ನದ ಬಾಂಡ್ ಮಾರಾಟ ನಡೆಯಲಿದೆ. ಕೇಂದ್ರ ಸರ್ಕಾರದ ಪರವಾಗಿ ಆರ್‌ಬಿಐ ಬಾಂಡ್‌ಗಳನ್ನು ವಿತರಣೆ ಮಾಡಲಿದೆ.
ಬಾಂಡ್ ಅವಧಿಯು 8 ವರ್ಷ ಇದ್ದು, ಅವಧಿ ಮುಗಿಯುವುದಕ್ಕೂ ಮುನ್ನ 5 ವರ್ಷಗಳ ಬಳಿಕ ನಗದೀಕರಿಸಬಹುದು. ವೈಯಕ್ತಿಕ ಖರೀದಿದಾರರಿಗೆ ಮತ್ತು ಹಿಂದೂ ಅವಿಭಕ್ತ ಕುಟುಂಬಕ್ಕೆ 4 ಕೆ.ಜಿ ಹಾಗೂ ಟ್ರಸ್ಟ್‌ಗಳಿಗೆ 20 ಕೆ.ಜಿಯ ಗರಿಷ್ಠ ಮಿತಿ ನೀಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.