ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿನ್ನದ ದರ ₹230, ಬೆಳ್ಳಿ ₹700 ಏರಿಕೆ

Published 6 ಮೇ 2024, 12:39 IST
Last Updated 6 ಮೇ 2024, 12:39 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಸೋಮವಾರ ಏರಿಕೆಯಾಗಿದೆ. 

10 ಗ್ರಾಂ ಚಿನ್ನದ ದರ ₹230 ಏರಿಕೆಯಾಗಿ ₹72,250ರಂತೆ ಮಾರಾಟವಾಯಿತು. ಬೆಳ್ಳಿ ಧಾರಣೆಯು ಕೆ.ಜಿಗೆ ₹700 ಹೆಚ್ಚಳವಾಗಿ ₹84,300ಕ್ಕೆ ಮುಟ್ಟಿದೆ. 

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,312 ಡಾಲರ್‌ (ಅಂದಾಜು ₹1.93 ಲಕ್ಷ) ಮತ್ತು 27.05 (ಅಂದಾಜು ₹2,258) ಡಾಲರ್‌ನಂತೆ ಮಾರಾಟವಾಗಿದೆ.

ಮಧ್ಯಪ್ರಾಚ್ಯ ಬಿಕ್ಕಟ್ಟು, ಡಾಲರ್‌ ಮೌಲ್ಯ ಇಳಿಕೆಯಿಂದ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆಯಾಗಿದೆ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT