ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕೆ.ಜಿ ಬೆಳ್ಳಿ ದರ ₹1,400 ಏರಿಕೆ

Published 6 ಜೂನ್ 2024, 13:58 IST
Last Updated 6 ಜೂನ್ 2024, 13:58 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ ಮತ್ತು ಬೆಳ್ಳಿ ಧಾರಣೆ ಏರಿಕೆ ಆಗಿದೆ.

ಪ್ರತಿ 10 ಗ್ರಾಂ ಚಿನ್ನದ ದರ ₹680 ಹೆಚ್ಚಳವಾಗಿದ್ದು, ₹73,500ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆಯು ಕೆ.ಜಿಗೆ ₹1,400 ಏರಿಕೆಯಾಗಿ ₹93,300ಕ್ಕೆ ಮುಟ್ಟಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,360 ಡಾಲರ್‌ (ಅಂದಾಜು ₹1.97 ಲಕ್ಷ) ಮತ್ತು 30.30 ಡಾಲರ್‌ನಂತೆ (ಅಂದಾಜು ₹2,530) ಮಾರಾಟ ಆಗಿದೆ.

‘ಅಮೆರಿಕದ ಬಾಂಡ್‌ ಗಳಿಕೆಯಲ್ಲಿ ಇಳಿಕೆಯಾಗಿದೆ. ಯುರೋಪ್‌ನ ಕೇಂದ್ರೀಯ ಬ್ಯಾಂಕ್‌ ಬಡ್ಡಿದರ ಕಡಿತ ಮಾಡುವ ಸಾಧ್ಯತೆಯಿದೆ. ಹಾಗಾಗಿ, ಚಿನ್ನದ ಬೆಲೆಯಲ್ಲಿ ಹೆಚ್ಚಳವಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಸೌಮಿಲ್‌ ಗಾಂಧಿ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT