ಚಿನ್ನ ₹442, ಬೆಳ್ಳಿ ₹950ರಷ್ಟು ಇಳಿಕೆ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನದ ದರ 10 ಗ್ರಾಂಗೆ ₹442ರಷ್ಟು ಇಳಿಕೆ ಕಂಡು ₹51,010ಕ್ಕೆ ತಲುಪಿತು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹950ರಷ್ಟು ಇಳಿಕೆ ಆಗಿ ₹64,167ರಂತೆ ಮಾರಾಟ ಆಯಿತು.
ಭಾರತದಲ್ಲಿ 2021ರ ಜನವರಿ–ಮಾರ್ಚ್ ಅವಧಿಗೆ ಹೋಲಿಸಿದರೆ 2022ರ ಜನವರಿ–ಮಾರ್ಚ್ ಅವಧಿಯಲ್ಲಿ ಚಿನ್ನಾಭರಣ ಬೇಡಿಕೆಯು ಶೇಕಡ 26ರಷ್ಟು ಕಡಿಮೆ ಆಗಿದೆ. ಇದೇ ಅವಧಿಯಲ್ಲಿ, ಚಿನ್ನದ ಮೇಲಿನ ಹೂಡಿಕೆಯು ಶೇ 5ರಷ್ಟು ಹೆಚ್ಚಾಗಿದೆ ಎಂದು ವಿಶ್ವ ಚಿನ್ನ ಸಮಿತಿ (ಡಬ್ಲ್ಯುಜಿಸಿ) ಹೇಳಿದೆ.
ಇನ್ನಷ್ಟು ಓದು–ತಗ್ಗಿದ ಚಿನ್ನಾಭರಣ ಬೇಡಿಕೆ, ಚಿನ್ನದ ಮೇಲಿನ ಹೂಡಿಕೆ ಹೆಚ್ಚಳ: ಡಬ್ಲ್ಯುಜಿಸಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.