ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹ 216, ಬೆಳ್ಳಿ ₹ 179ರಷ್ಟು ಇಳಿಕೆ

Last Updated 29 ಡಿಸೆಂಬರ್ 2021, 13:48 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ, ಬೆಳ್ಳಿ ದರ ಇಳಿಕೆ ಕಂಡಿದೆ. 10ಗ್ರಾಂ ಚಿನ್ನದ ದರ ₹ 216ರಷ್ಟು ಕಡಿಮೆಯಾಗಿ ₹ 47,010ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 179ರಷ್ಟು ಕಡಿಮೆ ಆಗಿ ₹ 61,348ಕ್ಕೆ ತಲುಪಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಉಂಟಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT