ನವದೆಹಲಿ: ದೇಶೀಯ ಆಭರಣ ತಯಾರಕರು ಮತ್ತು ಮಾರಾಟಗಾರರಿಂದ ಬೇಡಿಕೆ ಕಡಿಮೆಯಾಗಿದ್ದರಿಂದ ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಸೋಮವಾರ ಇಳಿಕೆಯಾಗಿದೆ.
10 ಗ್ರಾಂ ಚಿನ್ನದ ದರವು ₹250 ಕಡಿಮೆಯಾಗಿ ₹74,100ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹1,700 ಕಡಿಮೆಯಾಗಿ ₹85,500ಕ್ಕೆ ಇಳಿದಿದೆ ಎಂದು ಅಖಿಲ ಭಾರತ ಸರಾಫ್ ಅಸೋಸಿಯೇಷನ್ ಹೇಳಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,531 ಡಾಲರ್ (ಅಂದಾಜು ₹2.12 ಲಕ್ಷ) ಮತ್ತು 29 ಡಾಲರ್‌ನಂತೆ (ಅಂದಾಜು ₹2,432) ಮಾರಾಟವಾಗಿದೆ.