ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಚಿನ್ನ ₹ 369, ಬೆಳ್ಳಿ ₹ 390ರಷ್ಟು ಇಳಿಕೆ

Last Updated 14 ಜನವರಿ 2021, 11:23 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ, ಬೆಳ್ಳಿ ದರ ಇಳಿಕೆ ಕಂಡಿದೆ.

ಚಿನ್ನದ ದರ 10 ಗ್ರಾಂಗೆ ₹ 369ರಷ್ಟು ಇಳಿಕೆಯಾಗಿ ₹ 48,388ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 390ರಷ್ಟು ಕಡಿಮೆಯಾಗಿ ₹ 64,534ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಕಂಡಿದೆ. ಅದಕ್ಕೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ದರ ಇಳಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

‘ಡಾಲರ್‌ ಮೌಲ್ಯ ವೃದ್ಧಿಯಾಗಿದ್ದರಿಂದ ಚಿನ್ನದ ದರ ಇಳಿಕೆ ಕಂಡಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್‌ ಪಟೇಲ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT