ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ 10 ಗ್ರಾಂಗೆ ₹ 199ರಷ್ಟು ಇಳಿಕೆ ಆಗಿ ₹ 46,389ರಂತೆ ಮಾರಾಟವಾಯಿತು. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 250ರಷ್ಟು ಕಡಿಮೆಯಾಗಿ ₹ 62,063ಕ್ಕೆ ತಲುಪಿತು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಹಾಗೂ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಹೆಚ್ಚಳ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿದೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ತಿಳಿಸಿದೆ.