ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ 10 ಗ್ರಾಂಗೆ ₹350, ಬೆಳ್ಳಿ ಕೆ.ಜಿಗೆ ₹1,200 ಇಳಿಕೆ

Published 1 ನವೆಂಬರ್ 2023, 13:22 IST
Last Updated 1 ನವೆಂಬರ್ 2023, 13:22 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನದ ದರ 10 ಗ್ರಾಂಗೆ ₹350ರಷ್ಟು ಇಳಿಕೆ ಕಂಡು ₹61,700ರಂತೆ ಮಾರಾಟ ಆಯಿತು. ಬೆಳ್ಳಿ ಧಾರಣೆ ಕೆ.ಜಿಗೆ ₹1,200ರಷ್ಟು ಕಡಿಮೆ ಆಗಿ ₹74,300ಕ್ಕೆ ತಲುಪಿತು.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಅಮೆರಿಕದ ಡಾಲರ್ ಮೌಲ್ಯ ವೃದ್ಧಿ ಮತ್ತು ಬಾಂಡ್ ಗಳಿಕೆ ಹೆಚ್ಚಾಗಿರುವುದರಿಂದ ಚಿನ್ನದ ಬೆಲೆ ಇಳಿಕೆ ಕಾಣುವಂತಾಯಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT