ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನ, ಬೆಳ್ಳಿ ದರ ಹೆಚ್ಚಳ ಕಂಡಿದೆ. 10 ಗ್ರಾಂ ಚಿನ್ನದ ದರ ₹ 250ರಷ್ಟು ಹೆಚ್ಚಾಗಿ ₹ 46,277ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 250 ಹೆಚ್ಚಾಗಿ ₹ 66,842ಕ್ಕೆ ತಲುಪಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಮತ್ತು ರೂಪಾಯಿ ಮೌಲ್ಯ ಇಳಿಕೆಯ ಕಾರಣಗಳಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ತಿಳಿಸಿದೆ.