ನವದೆಹಲಿ (ಪಿಟಿಐ): ಚಿನ್ನ ಮತ್ತು ಬೆಳ್ಳಿಯ ಆಮದು ಸುಂಕವನ್ನು ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಿದ ನಂತರ ಕೇಂದ್ರ ಸರ್ಕಾರವು, ‘ಮುಂಗಡ ದೃಢೀಕರಣ ಯೋಜನೆ’ಯ ಅಡಿಯಲ್ಲಿ ಚಿನ್ನವನ್ನು ಆಮದು ಮಾಡಿಕೊಳ್ಳುವವರಿಗೆ 100 ಕೆ.ಜಿ. ಮಿತಿ ವಿಧಿಸಿದೆ.

ರಫ್ತುದಾರರು ಈ ಯೋಜನೆಯ ಅಡಿಯಲ್ಲಿ ಕಚ್ಚಾ ವಸ್ತುಗಳನ್ನು ಅಥವಾ ರಫ್ತು ಉದ್ದೇಶದ ಉತ್ಪನ್ನ ವೊಂದರ ತಯಾರಿಕೆಗೆ ಅಗತ್ಯವಿರುವ ಇತರ ವಸ್ತುಗಳನ್ನು ಶೂನ್ಯ ಸುಂಕ ದರದಲ್ಲಿ ಆಮದು ಮಾಡಿಕೊಳ್ಳಲು ಅವಕಾಶ ಇದೆ.

ಈ ಯೋಜನೆಯ ಅಡಿಯಲ್ಲಿ ಚಿನ್ನದ ಆಮದಿಗೆ ಈ ಮೊದಲು ಮಿತಿ ಇರಲಿಲ್ಲ. ನಿರ್ಬಂಧಕ್ಕೆ ಸಂಬಂಧಿಸಿದ ಆದೇಶವನ್ನು ವಿದೇಶ ವ್ಯಾಪಾರಗಳ ಮಹಾನಿರ್ದೇಶನಾಲಯದ (ಡಿಜಿಎಫ್ಟಿ) ಹೊರಡಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-51-170991887

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.