ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಏಪ್ರಿಲ್–ಜೂನ್ ಅವಧಿಯಲ್ಲಿ ₹ 18,590 ಕೋಟಿ ಮೌಲ್ಯದ ಚಿನ್ನ ಆಮದಾಗಿದೆ ಎಂದು ವಾಣಿಜ್ಯ ಸಚಿವಾಲಯ ಮಾಹಿತಿ ನೀಡಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ₹ 91,440 ಕೋಟಿ ಮೌಲ್ಯದ ಚಿನ್ನ ಆಮದಾಗಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಶೇಕಡ 81ರಷ್ಟು ಇಳಿಕೆ ಆಗಿದೆ.

ಕೋವಿಡ್–19 ಸಾಂಕ್ರಾಮಿಕ ಹರಡುತ್ತಿರುವುದರಿಂದ ಚಿನ್ನಕ್ಕೆ ಬೇಡಿಕೆ ಕಡಿಮೆಯಾಗಿರುವುದೇ ಆಮದು ಇಳಿಕೆಗೆ ಕಾರಣವಾಗಿದೆ ಎಂದು ಅದು ತಿಳಿಸಿದೆ. ಬೆಳ್ಳಿ ಆಮದು ಸಹ ಶೇ 56.5ರಷ್ಟು ಕಡಿಮೆಯಾಗಿದ್ದು, ₹ 5,185 ಕೋಟಿಗಳಷ್ಟಾಗಿದೆ.

ಚಿನ್ನ, ಬೆಳ್ಳಿ ಆಮದು ಇಳಿಕೆ ಆಗಿರುವುದರಿಂದ ಆಮದು ಮತ್ತು ರಫ್ತು ವಹಿವಾಟಿನ ನಡುವಣ ಅಂತರವಾದ ವ್ಯಾಪಾರ ಕೊರತೆ ₹ 4.42 ಲಕ್ಷ ಕೋಟಿಯಿಂದ ₹ 1.04 ಲಕ್ಷ ಕೋಟಿಗೆ ಇಳಿಕೆಯಾಗಿದೆ.

ಹರಳು ಮತ್ತು ಚಿನ್ನಾಭರಣ ರಫ್ತು ಶೇ 66ರಷ್ಟು ಇಳಿಕೆಯಾಗಿದ್ದು, ₹ 31,275 ಕೋಟಿಗಳಷ್ಟಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.