ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನವದೆಹಲಿ: ಚಿನ್ನದ ಆಮದು ಶೇ 30ರಷ್ಟು ಏರಿಕೆ

Published 10 ಮೇ 2024, 15:57 IST
Last Updated 10 ಮೇ 2024, 15:57 IST
ಅಕ್ಷರ ಗಾತ್ರ

ನವದೆಹಲಿ: ದೇಶೀಯ ಮಟ್ಟದಲ್ಲಿ ಹೆಚ್ಚಿದ ಬೇಡಿಕೆಯಿಂದಾಗಿ 2023–24ನೇ ಹಣಕಾಸು ವರ್ಷದಲ್ಲಿ ದೇಶದ ಚಿನ್ನದ ಆಮದು ಪ್ರಮಾಣದಲ್ಲಿ ಶೇ 30ರಷ್ಟು ಏರಿಕೆಯಾಗಿದ್ದು, ಒಟ್ಟು ಮೌಲ್ಯವು ₹3.80 ಲಕ್ಷ ಕೋಟಿಗೆ ಮುಟ್ಟಿದೆ.

2022–23ನೇ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಚಿನ್ನದ ಆಮದು ಮೌಲ್ಯವು ₹2.92 ಲಕ್ಷ ಕೋಟಿ ಆಗಿತ್ತು. ಮಾರ್ಚ್‌ನಲ್ಲಿ ₹12,779 ಕೋಟಿ ಮೌಲ್ಯದ ಚಿನ್ನವನ್ನು ಆಮದು ಮಾಡಿಕೊಳ್ಳಲಾಗಿದೆ. ಆದರೆ, ಕಳೆದ ವರ್ಷದ ಮಾರ್ಚ್‌ಗೆ ಹೋಲಿಸಿದರೆ ಶೇ 53ರಷ್ಟು ಕುಸಿದಿದೆ ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ತಿಳಿಸಿದೆ.

ಜಾಗತಿಕ ಮಟ್ಟದಲ್ಲಿ ಸ್ವಿಜ್ಜರ್‌ಲ್ಯಾಂಡ್‌ ಹೆಚ್ಚು ಪ್ರಮಾಣದಲ್ಲಿ ಚಿನ್ನ ಆಮದು ಮಾಡಿಕೊಳ್ಳುವ ರಾಷ್ಟ್ರವಾಗಿದ್ದು, ಶೇ 40ರಷ್ಟು ಪಾಲನ್ನು ಹೊಂದಿದೆ. ನಂತರದ ಸ್ಥಾನದಲ್ಲಿ ಯುಎಇ (ಶೇ 16ರಷ್ಟು) ಮತ್ತು ದಕ್ಷಿಣ ಆಫ್ರಿಕಾ (ಶೇ 10ರಷ್ಟು) ಇವೆ. ಭಾರತವು ಶೇ 5ರಷ್ಟು ಚಿನ್ನವನ್ನು ಆಮದು ಮಾಡಿಕೊಳ್ಳುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT