ಬುಧವಾರ, ಸೆಪ್ಟೆಂಬರ್ 22, 2021
29 °C

ಚಿನ್ನದ ಆಮದು ಭಾರಿ ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಚಿನ್ನದ ಆಮದಿನ ಮೌಲ್ಯವು 2020ರ ಏಪ್ರಿಲ್‌–ಜೂನ್‌ ಅವಧಿಗೆ ಹೋಲಿಸಿದರೆ ಈ ವರ್ಷದ ಏಪ್ರಿಲ್‌–ಜೂನ್‌ ಅವಧಿಯಲ್ಲಿ ಭಾರಿ ಏರಿಕೆ ಕಂಡಿದ್ದು, ₹ 58,572 ಕೋಟಿಗೆ ತಲುಪಿದೆ.

2020ರ ಏಪ್ರಿಲ್‌–ಜೂನ್‌ ಅವಧಿಯಲ್ಲಿ ಚಿನ್ನದ ಆಮದಿನ ಮೌಲ್ಯ ₹ 5,208 ಕೋಟಿ ಆಗಿತ್ತು ಎಂದು ಕೇಂದ್ರ ವಾಣಿಜ್ಯ ಸಚಿವಾಲಯ ಮಾಹಿತಿ ನೀಡಿದೆ.

ಬೆಳ್ಳಿ ಆಮದು ಶೇ 93.7ರಷ್ಟು ಕುಸಿತ ಕಂಡಿದ್ದು ₹ 2.91 ಲಕ್ಷ ಕೋಟಿಗಳಷ್ಟಾಗಿದೆ. ಚಿನ್ನದ ಆಮದು ಹೆಚ್ಚಾಗಿರುವುದರಿಂದ ದೇಶದ ವ್ಯಾಪಾರ ಕೊರತೆ ಅಂತರವು ₹ 2.29 ಲಕ್ಷ ಕೋಟಿಗೆ ಏರಿಕೆ ಆಗಿದೆ.

ಹರಳು ಮತ್ತು ಚಿನ್ನಾಭರಣ ರಫ್ತು ₹ 19,980 ಕೋಟಿಗಳಿಂದ ₹ 67,340 ಕೋಟಿಗಳಿಗೆ ಏರಿಕೆ ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು