ಮಂಗಳವಾರ, ಆಗಸ್ಟ್ 4, 2020
22 °C

ಚಿನ್ನದ ದರ ₹ 723 ಜಿಗಿತ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೇಶದಾದ್ಯಂತ ಬುಧವಾರ ಚಿನ್ನದ ಧಾರಣೆಯಲ್ಲಿ ಏರಿಕೆ ಕಂಡುಬಂದಿದೆ. ದೆಹಲಿಯ ಚಿನಿವಾರ ಪೇಟೆಯಲ್ಲಿ ಚಿನ್ನದ ಧಾರಣೆ 10ಗ್ರಾಂಗೆ ₹ 723ರಂತೆ ಏರಿಕೆಯಾಗಿ ₹ 49,898ರಂತೆ ಮಾರಾಟವಾಯಿತು. ಮಂಗಳವಾರ 10ಗ್ರಾಂ ಚಿನ್ನ ₹ 49,175ರಂತೆ ಮಾರಾಟವಾಗಿತ್ತು.

ಮುಂಬೈನಲ್ಲಿ 10ಗ್ರಾಂಗೆ ₹ 675ರಂತೆ ಹೆಚ್ಚಾಗಿ ₹ 48,925ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಹಾಗೂ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್‌ ಎದುರು ರೂಪಾಯಿ ಮೌಲ್ಯ ಇಳಿಕೆಯಿಂದಾಗಿ ದೇಶಿ ಚಿನಿವಾರ ಪೇಟೆಯಲ್ಲಿ ಚಿನ್ನದ ಧಾರಣೆ ಏರಿಕೆಯಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

‘ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿರುವುದರಿಂದ ಹೂಡಿಕೆದಾರರು ಸುರಕ್ಷಿತ ಬಂಡವಾಳ ಹೂಡಿಕೆಯತ್ತ ಗಮನ ಹರಿಸಿದ್ದಾರೆ. ಹೀಗಾಗಿ ಚಿನ್ನದ ದರ ಹೆಚ್ಚಾಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್‌ ಪಟೇಲ್‌ ಹೇಳಿದ್ದಾರೆ.

ಬೆಳ್ಳಿ ಧಾರಣೆ ಕೆ.ಜಿಗೆ ₹ 104 ರಂತೆ ಇಳಿಕೆಯಾಗಿ ₹ 50,416ರಲ್ಲಿ ಮಾರಾಟವಾಗಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು