ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚಿನ್ನದ ದರ ₹1,100 ಏರಿಕೆ

Published 9 ಆಗಸ್ಟ್ 2024, 13:56 IST
Last Updated 9 ಆಗಸ್ಟ್ 2024, 13:56 IST
ಅಕ್ಷರ ಗಾತ್ರ

ನವದೆಹಲಿ/ ಬೆಂಗಳೂರು: ಜಾಗತಿಕ ಮತ್ತು ದೇಶೀಯ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಳದಿಂದಾಗಿ ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನ ಮತ್ತು ಬೆಳ್ಳಿ ಧಾರಣೆಯಲ್ಲಿ ಏರಿಕೆಯಾಗಿದೆ.

10 ಗ್ರಾಂ ಚಿನ್ನದ ದರವು ₹1,100 ಏರಿಕೆಯಾಗಿ, ₹72,450ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆಯು ಕೆ.ಜಿಗೆ ₹1,400 ಹೆಚ್ಚಳವಾಗಿ, ₹82,500ಕ್ಕೆ ಮುಟ್ಟಿದೆ ಎಂದು ಅಖಿಲ ಭಾರತ ಸರಾಫ್‌ ಅಸೋಸಿಯೇಷನ್‌ ತಿಳಿಸಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,468 ಡಾಲರ್‌ (ಅಂದಾಜು ₹2.07 ಲಕ್ಷ) ಮತ್ತು 27.60 ಡಾಲರ್‌ನಂತೆ (ಅಂದಾಜು ₹2,317) ಮಾರಾಟವಾಗಿದೆ.

ಬೆಂಗಳೂರಿನಲ್ಲಿ 10 ಗ್ರಾಂ ಚಿನ್ನದ ದರವು ₹71,630 ಮತ್ತು ಕೆ.ಜಿ ಬೆಳ್ಳಿ ಧಾರಣೆ ₹82,600 ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT