ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹1,298 ಏರಿಕೆ

Last Updated 7 ಮಾರ್ಚ್ 2022, 15:19 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ ಆಗಿದೆ. 10 ಗ್ರಾಂ ಚಿನ್ನದ ದರ ₹ 1,298ರಷ್ಟು ಹೆಚ್ಚಾಗಿ ₹ 53,784ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 1,910ರಷ್ಟು ಏರಿಕೆ ಕಂಡು ₹ 70,977ಕ್ಕೆ ಏರಿಕೆ ಆಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಹಾಗೂ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಕುಸಿತವು ದೇಶದಲ್ಲಿ ಚಿನ್ನದ ದರ ಹೆಚ್ಚಳಕ್ಕೆ ಕಾರಣವಾಯಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ರಷ್ಯಾ ಮತ್ತು ಉಕ್ರೇನ್‌ ನಡುವಿನ ಸಂಘರ್ಷವು ತೀವ್ರಗೊಂಡಿರುವುದರಿಂದ ಹೂಡಿಕೆದಾರರು ಚಿನ್ನವನ್ನು ಹೆಚ್ಚು ಖರೀದಿ ಮಾಡಿದರು. ಇದರಿಂದಾಗಿ ದರವು ಏರಿಕೆ ಕಾಣುವಂತಾಯಿತು ಎಂದು ಮೋತಿಲಾಲ್‌ ಓಸ್ವಾಲ್‌ ಫೈನಾನ್ಶಿಯಲ್‌ ಸರ್ವೀಸಸ್‌ನ ಹಿರಿಯ ಉಪಾಧ್ಯಕ್ಷ ನವನೀತ್‌ ದಮನಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT