ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹ 249ರಷ್ಟು, ಬೆಳ್ಳಿ ₹ 365ರಷ್ಟು ಹೆಚ್ಚಳ

Last Updated 17 ಮಾರ್ಚ್ 2022, 16:24 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ, ಬೆಳ್ಳಿ ದರ ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ ₹ 249ರಷ್ಟು ಹೆಚ್ಚಾಗಿ ₹51,500ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 365ರಷ್ಟು ಏರಿಕೆ ಕಂಡು ₹ 68,218ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದು ದೇಶಿ ಮಾರುಕಟ್ಟೆಯಲ್ಲಿಯೂ ದರ ಹೆಚ್ಚಳಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಅಮೆರಿಕದ ಬಾಂಡ್‌ ಗಳಿಕೆಯು ಕಡಿಮೆ ಆಗಿದ್ದರಿಂದ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್‌ ಪಟೇಲ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT