ನವದೆಹಲಿ: ಬೆಂಗಳೂರಿನಲ್ಲಿ ಸೋಮವಾರದಂದು ಚಿನ್ನ ಮತ್ತು ಬೆಳ್ಳಿ ದರವು ಸಾರ್ವಕಾಲಿಕ ಗರಿಷ್ಠಮಟ್ಟ ಮುಟ್ಟಿತ್ತು. 10 ಗ್ರಾಂ ಚಿನ್ನದ ದರವು ₹73,560ರಂತೆ ಮಾರಾಟವಾಗಿದೆ. ಇದೇ ವೇಳೆ ಕೆ.ಜಿ ಬೆಳ್ಳಿ ಧಾರಣೆ ₹83,900ಕ್ಕೆ ಮುಟ್ಟಿದೆ.

ದೆಹಲಿಯಲ್ಲೂ ಏರಿಕೆ: ದೆಹಲಿಯಲ್ಲಿ ಚಿನ್ನದ ದರವು 10 ಗ್ರಾಂಗೆ ₹350 ಏರಿಕೆಯಾಗಿದ್ದು, ₹71,700ಕ್ಕೆ ಮಾರಾಟವಾಯಿತು. ಬೆಳ್ಳಿ ಧಾರಣೆಯು ಪ್ರತಿ ಕೆ.ಜಿಗೆ ₹800 ಹೆಚ್ಚಳವಾಗಿದೆ. ಪ್ರಸ್ತುತ ಒಂದು ಕೆ.ಜಿ ಬೆಳ್ಳಿ ಧಾರಣೆಯು ₹84,000ಕ್ಕೆ ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಕಂಡಿದೆ. ಇದು ದೇಶೀಯ ಮಾರುಕಟ್ಟೆ ಮೇಲೂ ಪರಿಣಾಮ ಬೀರಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ತಿಳಿಸಿದ್ದಾರೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆ ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,336 ಡಾಲರ್ (ಅಂದಾಜು ₹ 1.94 ಲಕ್ಷ) ಮತ್ತು 27.80 (ಅಂದಾಜು ₹2,315) ಡಾಲರ್‌ನಂತೆ ಮಾರಾಟವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.