ಗುರುವಾರ , ಮಾರ್ಚ್ 23, 2023
22 °C

ಚಿನ್ನದ ದರ ₹433, ಬೆಳ್ಳಿ ₹990ರಷ್ಟು ಹೆಚ್ಚಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ 10 ಗ್ರಾಂಗೆ ₹ 433ರಷ್ಟು ಏರಿಕೆ ಕಂಡು ₹ 57,025ರಂತೆ ಮಾರಾಟ ಆಯಿತು. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಬೆಳ್ಳಿ ಧಾರಣೆ ಕೆ.ಜಿ.ಗೆ ₹ 990ರಷ್ಟು ಹೆಚ್ಚಾಗಿ ₹ 69,208ಕ್ಕೆ ತಲುಪಿತು.

ಅಮೆರಿಕದ ಆರ್ಥಿಕತೆಯ ಬೆಳವಣಿಗೆಯು ಮಂದಗತಿಯಲ್ಲಿ ಇರುವ ಸಾಧ್ಯತೆ ಹಾಗೂ ಫೆಡರಲ್ ರಿಸರ್ವ್‌ನ ಬಿಗಿಯಾದ ಹಣಕಾಸು ನೀತಿಯಿಂದಾಗಿ ಹಿಂಜರಿತದ ಆತಂಕ ಹೆಚ್ಚಾಗಿದೆ. ಹೀಗಾಗಿ, ಹೂಡಿಕೆಗೆ ಸುರಕ್ಷಿತ ಮಾರ್ಗವಾಗಿರುವ ಚಿನ್ನದ ಬೆಲೆಯು ಶುಕ್ರವಾರ ಏರಿಕೆ ಕಾಣುವಂತೆ ಆಯಿತು ಎಂದು ವಿಶ್ಲೇಷಕರು ಹೇಳಿದ್ದಾರೆ.

ಫೆಬ್ರುವರಿಯಲ್ಲಿ ನಡೆಯಲಿರುವ ಫೆಡರಲ್‌ ರಿಸರ್ವ್‌ ಸಭೆಯಲ್ಲಿ ಬಡ್ಡಿದರವನ್ನು ಶೇ 0.25ರಷ್ಟು ಹೆಚ್ಚಿಸುವ ಘೋಷಣೆ ಆಗಲಿದೆ ಎಂದು ಮಾರುಕಟ್ಟೆ ವಹಿವಾಟುದಾರರು ನಿರೀಕ್ಷೆ ಮಾಡಿದ್ದಾರೆ. ಇದು ಅಮೆರಿಕದ ಬಾಂಡ್‌ ಗಳಿಕೆ ಮೇಲೆ ಪರಿಣಾಮ ಬೀರುವ ಜೊತೆಗೆ ಚಿನ್ನದ ದರ ಹೆಚ್ಚಳಕ್ಕೆ ಕಾರಣವಾಗುತ್ತಿದೆ ಎಂದು ಮೋತಿಲಾಲ್‌ ಓಸ್ವಾಲ್‌ ಫೈನಾನ್ಶಿಯಲ್‌ ಸರ್ವಿಸಸ್‌ನ ಹಿರಿಯ ಉಪಾಧ್ಯಕ್ಷ ನವ್‌ನೀತ್‌ ದಮನಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು