ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹480 ಹೆಚ್ಚಳ

Last Updated 14 ಏಪ್ರಿಲ್ 2023, 12:46 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನ, ಬೆಳ್ಳಿ ದರ ಏರಿಕೆ ಕಂಡಿತು. ಚಿನ್ನದ ದರ 10 ಗ್ರಾಂಗೆ ₹480ರಷ್ಟು ಹೆಚ್ಚಾಗಿ ಗರಿಷ್ಠ ಮಟ್ಟವಾದ ₹61,780ಕ್ಕೆ ತಲುಪಿತು.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಬೆಳ್ಳಿ ಧಾರಣೆ ಕೆ.ಜಿಗೆ ₹410ರಷ್ಟು ಹೆಚ್ಚಾಗಿ ₹77,580ಕ್ಕೆ ಏರಿಕೆ ಆಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಒಂದು ಔನ್ಸ್‌ಗೆ (28.34 ಗ್ರಾಂ) 2,041 ಡಾಲರ್‌ ಮತ್ತು ಬೆಳ್ಳಿ ಒಂದು ಔನ್ಸ್‌ಗೆ 25.88 ಡಾಲರ್‌ನಂತೆ ಮಾರಾಟವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT