ಮಂಗಳವಾರ, 30 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ 10 ಗ್ರಾಂಗೆ ₹830 ಏರಿಕೆ

Published 3 ಏಪ್ರಿಲ್ 2024, 15:23 IST
Last Updated 3 ಏಪ್ರಿಲ್ 2024, 15:23 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ ಮತ್ತು ಬೆಳ್ಳಿ ದರ ಏರಿಕೆ ಆಗಿದೆ. ಈ ವಾರದಲ್ಲಿ ಎರಡನೇ ಬಾರಿಗೆ ಹಳದಿ ಲೋಹದ ಬೆಲೆ ಏರಿಕೆ ಕಂಡಿದೆ.

ಚಿನ್ನದ ದರವು 10 ಗ್ರಾಂಗೆ ₹830 ಏರಿಕೆಯಾಗಿದ್ದು, ₹69,200ಕ್ಕೆ ಮಾರಾಟವಾಯಿತು. ಬೆಳ್ಳಿ ಧಾರಣೆಯು ಪ್ರತಿ ಕೆ.ಜಿಗೆ ₹1,700 ಹೆಚ್ಚಳವಾಗಿದೆ. ಪ್ರಸ್ತುತ ಒಂದು ಕೆ.ಜಿ ಬೆಳ್ಳಿ ಧಾರಣೆಯು ₹80,700ಕ್ಕೆ ತಲುಪಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್ ಗಾಂಧಿ ತಿಳಿಸಿದ್ದಾರೆ.‌

‘ಅಮೆರಿಕದ ಆರ್ಥಿಕತೆ ಬೆಳವಣಿಗೆಯು ನಿರೀಕ್ಷೆಗಿಂತಲೂ ಹೆಚ್ಚು ಪ್ರಗತಿ ಕಾಣಲಿದೆ ಎಂದು ಅಂದಾಜಿಸಲಾಗಿದೆ. ಈ ನಡುವೆಯೇ ಅಲ್ಲಿನ ಕೇಂದ್ರೀಯ ಬ್ಯಾಂಕ್‌ ಫೆಡರಲ್‌ ರಿಸರ್ವ್‌ನ ಬಡ್ಡಿದರ ಕಡಿತವು ಅನಿಶ್ಚಿತತೆಯಿಂದ ಕೂಡಿದೆ. ಇದು ಚಿನ್ನದ ಬೆಲೆ ಏರಿಕೆಗೆ ಕಾರಣವಾಗಿದೆ’ ಎಂದು ಜೆಎಂ ಫೈನಾನ್ಶಿಯಲ್ ಸರ್ವಿಸಸ್‌ ಲಿಮಿಟೆಡ್‌ನ ಉಪಾಧ್ಯಕ್ಷ (ಸರಕು ಮತ್ತು ಕರೆನ್ಸಿ ಸಂಶೋಧನೆ) ಪ್ರಣವ್ ಮೆರ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT