ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Gold and Silver Rate: ಚಿನ್ನ ₹1,450, ಬೆಳ್ಳಿ ₹2,300 ಇಳಿಕೆ

Published 23 ಏಪ್ರಿಲ್ 2024, 12:53 IST
Last Updated 23 ಏಪ್ರಿಲ್ 2024, 12:53 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಮತ್ತೆ ಚಿನ್ನ ಮತ್ತು ಬೆಳ್ಳಿ ಧಾರಣೆಯು ಇಳಿಕೆಯಾಗಿದೆ. 

ಚಿನ್ನದ ದರ 10 ಗ್ರಾಂಗೆ ₹1,450 ಕಡಿಮೆಯಾಗಿ, ₹72,200ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆಯು ಕೆ.ಜಿಗೆ ₹2,300 ಕುಸಿದು, ₹83,500 ಆಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಧಾರಣೆಯು ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,310 ಡಾಲರ್‌ (ಅಂದಾಜು ₹1.92 ಲಕ್ಷ) ಮತ್ತು 28.29 (ಅಂದಾಜು ₹2,233) ಡಾಲರ್‌ನಂತೆ ಮಾರಾಟವಾಗಿದೆ.

‘ಇಸ್ರೇಲ್‌ ಮತ್ತು ಇರಾನ್‌ ನಡುವೆ ತಲೆದೋರಿದ್ದ ಉದ್ವಿಗ್ನತೆ ಕಡಿಮೆಯಾಗಿದೆ. ಅಲ್ಲದೆ, ಅಮೆರಿಕದ ಕೇಂದ್ರೀಯ ಬ್ಯಾಂಕ್‌ ಫೆಡರಲ್‌ ರಿಸರ್ವ್‌ ಬಡ್ಡಿದರ ಕಡಿತಗೊಳಿಸುವ ನಿರ್ಧಾರವನ್ನು ಮುಂದೂಡುವ ಸಾಧ್ಯತೆಯಿದೆ. ಇದು ಮಾರುಕಟ್ಟೆಯ ಮೇಲೆ ಪರಿಣಾಮ ಬೀರಿದೆ. ಹಾಗಾಗಿ, ಹಳದಿ ಲೋಹದ ಧಾರಣೆ ಇಳಿಕೆಯಾಗಿದೆ’ ಎಂದು ಮಾರುಕಟ್ಟೆ ತಜ್ಞರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT