ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿನ್ನದ ದರ ₹400, ಬೆಳ್ಳಿ ₹600 ಇಳಿಕೆ

Published 17 ಜನವರಿ 2024, 16:05 IST
Last Updated 17 ಜನವರಿ 2024, 16:05 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನ ಮತ್ತು ಬೆಳ್ಳಿ ದರ ಇಳಿಕೆ ಆಗಿದೆ. ಚಿನ್ನದ ದರ 10 ಗ್ರಾಂ.ಗೆ ₹400 ಇಳಿಕೆಯಾಗಿ, ₹63,050ಕ್ಕೆ ಮಾರಾಟವಾಯಿತು.

ಬೆಳ್ಳಿ ಧಾರಣೆ ಕೆ.ಜಿಗೆ ₹600 ಕಡಿಮೆಯಾಗಿ, ₹75,800ಕ್ಕೆ ತಲುಪಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿದ್ದು, ದೇಶೀಯ ಮಾರುಕಟ್ಟೆಯ ಮೇಲೂ ಪರಿಣಾಮ ಬೀರಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ಸೌಮಿಲ್‌ ಗಾಂಧಿ ಹೇಳಿದ್ದಾರೆ. 

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ಒಂದು ಔನ್ಸ್‌ಗೆ (28.34 ಗ್ರಾಂ) ಕ್ರಮವಾಗಿ 2,024 ಡಾಲರ್‌ ಮತ್ತು 22.70 ಡಾಲರ್‌ನಂತೆ ಮಾರಾಟವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT