ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 915, ಬೆಳ್ಳಿ ₹ 2,221ರಷ್ಟು ಇಳಿಕೆ

Last Updated 20 ಏಪ್ರಿಲ್ 2022, 14:46 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನದ ದರ 10 ಗ್ರಾಂಗೆ ₹ 915ರಷ್ಟು ಇಳಿಕೆ ಆಗಿದ್ದು ₹ 52,367ರಂತೆ ಮಾರಾಟ ಆಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 2,221ರಷ್ಟು ಇಳಿಕೆಯಾಗಿ ₹ 67,969ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಮತ್ತು ರೂಪಾಯಿ ಮೌಲ್ಯ ಏರಿಕೆಯಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಕಾಣುವಂತಾಯಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಅಮೆರಿಕದ ಟ್ರಷರಿ ಬಾಂಡ್‌ ಗಳಿಕೆ ಹೆಚ್ಚಳದಿಂದಾಗಿ ಚಿನ್ನದ ಬೇಡಿಕೆ ಕಡಿಮೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ರಿಟೇಲ್‌ ವಿಭಾಗದ ಸಂಶೋಧನಾ ವಿಶ್ಲೇಷಕ ದಿಲೀಪ್‌ ಪಾರ್ಮರ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT