ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನದ ದರ 10ಗ್ರಾಂಗೆ ₹450ರಷ್ಟು ಹೆಚ್ಚಾಗಿ ₹59,350ಕ್ಕೆ ತಲುಪಿತು. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‍ಸಿ ಸೆಕ್ಯುರಿಟೀಸ್ ತಿಳಿಸಿದೆ.
ಬೆಳ್ಳಿ ಧಾರಣೆ ಕೆ.ಜಿಗೆ ₹815ರಷ್ಟು ಏರಿಕೆ ಕಂಡು ₹69,800ರಂತೆ ಮಾರಾಟವಾಯಿತು.
ಮಾರುಕಟ್ಟೆಯ ನಿರೀಕ್ಷೆಯಂತೆಯೇ ಅಮೆರಿಕದ ಕೇಂದ್ರೀಯ ಬ್ಯಾಂಕ್ ಫೆಡರಲ್ ರಿಸರ್ವ್ ಬಡ್ಡಿದರವನ್ನು ಶೇ 0.25ರಷ್ಟು ಹೆಚ್ಚಳ ಮಾಡಿದೆ. ಈ ಬೆಳವಣಿಗೆಯು ಚಿನ್ನದ ದರ ಹೆಚ್ಚಳಕ್ಕೆ ಕಾರಣವಾಯಿತು. ದೇಶದ ಹಣಕಾಸು ವಲಯದಲ್ಲಿನ ಈಚಿನ ಬಿಕ್ಕಟ್ಟನ್ನು ಗಮನದಲ್ಲಿ ಇಟ್ಟುಕೊಂಡು ಭವಿಷ್ಯದಲ್ಲಿ ಬಡ್ಡಿದರ ಹೆಚ್ಚಿಸುವ ಪ್ರವೃತ್ತಿಗೆ ತುಸು ವಿರಾಮ ನೀಡುವ ಸೂಚನೆಯನ್ನು ಅದು ನೀಡಿದೆ ಎಂದು ಮೋತಿಲಾಲ್ ಓಸ್ವಾಲ್ ಫೈನಾನ್ಶಿಯಲ್ ಸರ್ವಿಸಸ್‌ನ ಹಿರಿಯ ಉಪಾಧ್ಯಕ್ಷ ನವ್‌ನೀತ್ ದಮಾನಿ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.