ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಸೋಮವಾರ ಚಿನ್ನದ ದರ 10 ಗ್ರಾಂಗೆ ₹ 1,400ರಷ್ಟು ಜಿಗಿತ ಕಂಡು ಸಾರ್ವಕಾಲಿಕ ಗರಿಷ್ಠ ಮಟ್ಟವಾದ ₹ 60,100ಕ್ಕೆ ತಲುಪಿದೆ.
ಬ್ಯಾಂಕಿಂಗ್ ವಲಯದ ಬಿಕ್ಕಟ್ಟಿನಿಂದಾಗಿ ಜಾಗತಿಕ ಷೇರುಪೇಟೆಗಳಲ್ಲಿ ನಕಾರಾತ್ಮಕ ವಹಿವಾಟು ನಡೆಯುತ್ತಿದೆ. ಇದು ಚಿನ್ನದ ಬೆಲೆಯಲ್ಲಿ ಏರಿಕೆಗೆ ಕಾರಣವಾಗಿದೆ. ಮೂರು ವರ್ಷಗಳ ಅವಧಿಯಲ್ಲಿ ಒಂದೇ ವಾರದಲ್ಲಿ ಆಗಿರುವ ಅತಿಹೆಚ್ಚಿನ ಏರಿಕೆ ಇದು ಎಂದು ಮೋತಿಲಾಲ್ ಓಸ್ವಾಲ್ ಫೈನಾನ್ಶಿಯಲ್ ಸರ್ವಿಸಸ್‌ನ ಹಿರಿಯ ಉಪಾಧ್ಯಕ್ಷ ನವ್‌ನೀತ್ ದಮಾನಿ ತಿಳಿಸಿದ್ದಾರೆ.
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದು ನವದೆಹಲಿ ಮಾರುಕಟ್ಟೆಯಲ್ಲಿನ ಬೆಲೆ ಹೆಚ್ಚಳಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 1,860ರಷ್ಟು ಏರಿಕೆ ಕಂಡು ₹ 69,340ರಂತೆ ಮಾರಾಟ ಆಯಿತು.
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಒಂದು ಔನ್ಸ್‌ಗೆ (28.34 ಗ್ರಾಂ) 2,005 ಡಾಲರ್‌ಗೆ ತಲುಪಿತು. ಬೆಳ್ಳಿ ಧಾರಣೆ ಒಂದು ಔನ್ಸ್‌ಗೆ 22.55 ಡಾಲರ್‌ಗೆ ತಲುಪಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.