ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 1,202, ಬೆಳ್ಳಿ ₹ 2,148ರಷ್ಟು ಹೆಚ್ಚಳ

Last Updated 2 ಮಾರ್ಚ್ 2022, 14:04 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನ, ಬೆಳ್ಳಿ ದರ ಏರಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ ₹ 1,202ರಷ್ಟು ಹೆಚ್ಚಾಗಿ ₹ 51,889ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 2,148ರಷ್ಟು ಹೆಚ್ಚಾಗಿ ₹ 67,956ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಹಾಗೂ ಕರೆನ್ಸಿ ವಿನಿಮಯ ಮಾರುಕಟ್ಟೆಯಲ್ಲಿ ಅಮೆರಿಕದ ಡಾಲರ್‌ ಎದುರು ರೂಪಾಯಿ ಮೌಲ್ಯ ಇಳಿಕೆಯಿಂದಾಗಿ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಜಾಗತಿಕ ಬಿಕ್ಕಟ್ಟು ಮತ್ತು ಹಣದುಬ್ಬರದ ಆತಂಕದಿಂದಾಗಿ ಚಿನ್ನದ ದರ ಏರಿಕೆ ಆಗುತ್ತಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್ ಪಟೇಲ್‌ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT