ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ದರ10 ಗ್ರಾಂಗೆ ₹ 340ರಷ್ಟು ಹೆಚ್ಚಾಗಿ ₹ 53,611ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ₹ 1,306ರಷ್ಟು ಹೆಚ್ಚಾಗಿ ಕೆ.ಜಿಗೆ ₹ 69,820ಕ್ಕೆ ತಲುಪಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರದಲ್ಲಿ ಏರಿಕೆ ಆಗಿರುವುದೇ ದೇಶದಲ್ಲಿಯೂ ದರ ಏರಿಕೆಗೆ ಕಾರಣವಾಗಿದೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ಹೇಳಿದೆ.
‘ಜಾಗತಿಕ ಆರ್ಥಿಕ ಬೆಳವಣಿಗೆ ಬಗ್ಗೆ ಆತಂಕ ವ್ಯಕ್ತವಾಗಿದೆ. ಇದರಿಂದಾಗಿ ಸೋಮವಾರ ಚಿನ್ನದ ದರ ಹೆಚ್ಚಾಯಿತು’ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ನ ಹಿರಿಯ ವಿಶ್ಲೇಷಕ ತಪನ್ ಪಟೇಲ್ ಹೇಳಿದ್ದಾರೆ.